ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರೈತರಿಗೆ ನೆರವಾಗದ ಬಿಜೆಪಿ ಸರ್ಕಾರ’

Last Updated 23 ಅಕ್ಟೋಬರ್ 2020, 9:53 IST
ಅಕ್ಷರ ಗಾತ್ರ

ಐಗಳಿ: ‘ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಮುಖಂಡ ಶಹಜಹಾನ ಡೊಂಗರಗಾಂವ ವಿಶ್ವಾಸ ವ್ಯಕ್ತ‍ಪಡಿಸಿದರು.

ಸಮೀಪದ ಕೋಹಳ್ಳಿ ಗ್ರಾಮದಲ್ಲಿ ತೆಲಸಂಗ ಬ್ಲಾಕ್ ಕಾಂಗ್ರೆಸ್‌ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ರಾಷ್ಟ್ರಪತಿಗೆ ಮನವಿ ರವಾನಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ಕಾರ್ಯಕರ್ತರು ಶ್ರಮಿಸಬೇಕು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರನ್ನು ಬೆಂಬಲಿಸಬೇಕು’ ಎಂದರು.

‘ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದಾಗ ಮಳೆಯಿಂದ ಹಾನಿಗೀಡಾಗಿದ್ದ ಬೆಳೆಗಳಿಗೆ ಸಮರ್ಪಕ ಪರಿಹಾರ ಒದಗಿಸಲಾಗಿತ್ತು. ಈಗಿನ ಬಿಜೆಪಿ ಸರ್ಕಾರದಲ್ಲಿ ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಹಾಗೂ ಹಾನಿ ಅನುಭವಿಸಿದವರಿಗೆ ಸಮರ್ಪಕ ಪರಿಹಾರವೂ ಸಿಕ್ಕಿಲ್ಲ. ಸಣ್ಣ ಮತ್ತು ಅತಿ ಸಣ್ಣ ಹಾಗೂ ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ಹಾನಿಯಾದ ಸ್ಥಳಗಳಿಗೆ ಅಧಿಕಾರಿಗಳು ಬಂದು ಸಮೀಕ್ಷೆ ನಡೆಸಿಲ್ಲ. ಅವರು ಸರ್ಕಾರದ ಕೈಗೊಂಬೆಯಾಗಿದ್ದಾರೆ’ ಎಂದು ಆರೋಪಿಸಿದರು.

ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ ಪೂಜಾರಿ, ಉಪಾಧ್ಯಕ್ಷ ಚಿದಾನಂದ ತಳಕೇರಿ, ಮುಖಂಡರಾದ ಗಜಾನನ ಮಂಗಸೂಳಿ, ಸತ್ಯಪ್ಪ ಬಾಗೆನ್ನವರ, ರಮೇಶ ಸಿಂದಗಿ, ಸುರೇಶಗೌಡ ಪಾಟೀಲ, ಅನಿಲ ಸುಣದೋಳಿ, ಸುನಿಲ ಸಂಕ, ಬಸವರಾಜ ಬುಟಾಳೆ, ಭೀರಪ್ಪ ಯಂಕ್ಕಚಿ, ಶ್ರೀಮಂತ ಮುಧೋಳ, ಶೌಖತಲಿ ಡೊಂಗರಗಾಂವ, ಸದಾಶಿವ ಹರಪಾಳೆ, ತುಕಾರಾಮ ಫಡತಾರೆ, ಸಂಗಪ್ಪ ಡಂಬಳಿ, ಕೇಧಾರಿ ವಳಸಂಗ, ಸುನೀಲ ಗುರಪ್ಪಗೋಳ, ದೇವಾನಂದ ಗುರಪ್ಪಗೋಳ, ಅಣ್ಣಪ್ಪ ಪುಂಡಿಪಲ್ಲೆ, ಶಾಮು ಕನ್ನಾಳ, ಅಶೋಕ ಮೆಂಡಿಗೇರಿ, ಪ್ರಕಾಶ ಕನ್ನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT