ಬೆಳಗಾವಿ: ‘ಪಾಲಿಕೆಯ ಎಲ್ಲ ಸದಸ್ಯರ ಅಭಿಪ್ರಾಯವನ್ನು ಪಕ್ಷದ ಹಿರಿಯ ನಾಯಕರ ಗಮನಕ್ಕೆ ತಂದು, ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಘೋಷಿಸಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು.

ಇಲ್ಲಿ ಮಂಗಳವಾರ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

‘ಮೇಯರ್ ಸ್ಥಾನ ‘ಸಾಮಾನ್ಯ’ ವರ್ಗಕ್ಕೆ, ಉಪಮೇಯರ್ ಸ್ಥಾನ ‘ಸಾಮಾನ್ಯ ಮಹಿಳೆ’ ವರ್ಗಕ್ಕೆ ಮೀಸಲಾಗಿದೆ. ಮೇಯರ್ ಹುದ್ದೆಗೆ ಮೂವರು, ಉಪಮೇಯರ್ ಹುದ್ದೆಗೆ ಐವರು ಮಹಿಳೆಯರು ಆಕಾಂಕ್ಷಿಗಳು ಇದ್ದಾರೆ. ಎರಡೂ ಸ್ಥಾನಗಳಿಗೆ ಇರುವ ಆಕಾಂಕ್ಷಿಗಳ ಹೆಸರುಗಳನ್ನು ಹಿರಿಯ ನಾಯಕರ ಗಮನಕ್ಕೆ ತಂದ ನಂತರ ಅಂತಿಮಗೊಳಿಸಲಾಗುವುದು’ ಎಂದರು.

ಶಾಸಕ ಅಭಯ ಪಾಟೀಲ, ‘ಪಾಲಿಕೆಯಲ್ಲಿ ಬಿಜೆಪಿಗೆ ಬಹುಮತವಿದ್ದು, ನಮ್ಮ ಪಕ್ಷದ ಅಭ್ಯರ್ಥಿಗಳೇ ಮೇಯರ್ ಮತ್ತು ಉಪಮೇಯರ್ ಆಗಿ ಆಯ್ಕೆಯಾಗುತ್ತಾರೆ. ಚುನಾವಣೆ ಮುನ್ನಾದಿನವಾದ ಶುಕ್ರವಾರ(ಮಾರ್ಚ್ 14ರಂದು) ಎನ್.ರವಿಕುಮಾರ್ ಬೆಳಗಾವಿಗೆ ಭೇಟಿ ನೀಡಲಿದ್ದು, ಅಂದು ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಆನಂದ ಚವ್ಹಾಣ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ, ಬೆಳಗಾವಿ ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಪಾಲಿಕೆ ಆಡಳಿತ ಪಕ್ಷದ ನಾಯಕ ಗಿರೀಶ ಧೊಂಗಡಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.