ಬೆಳಗಾವಿ: ಮಂಗಲಾ ಮೆಟಗುಡ್ಡಗೆ ಬಿಜೆಪಿ ನಾಯಕ ಪ್ರಭಾಕರ ಕೋರೆ ಬೆಂಬಲ

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆ ಬಯಸಿರುವ ಮಂಗಲಾ ಮೆಟಗುಡ್ಡ ಅವರಿಗೆ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ, ಬಿಜೆಪಿ ನಾಯಕ ಪ್ರಭಾಕರ ಕೋರೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ನ.21ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಲಾ ಸಿದ್ಧಪಡಿಸಿರುವ ಪ್ರಣಾಳಿಕೆಯನ್ನು ಇಲ್ಲಿನ ನೆಹರೂ ನಗರದ ಕನ್ನಡ ಭವನದಲ್ಲಿ ಬಿಡುಗಡೆ ಮಾಡುವ ಮೂಲಕ ಬೆಂಬಲ ಘೋಷಿಸಿದರು.
ಈ ಸಂದರ್ಭದಲ್ಲಿ ಸಾಹಿತಿಗಳಾದ ಬಿ.ಎಸ್. ಗವಿಮಠ, ಬಸವರಾಜ ಜಗಜಂಪಿ, ಯ.ರು. ಪಾಟೀಲ, ಗುರುದೇವಿ ಹುಲೆಪ್ಪನವರಮಠ, ಮಹೇಶ ಗುರನಗೌಡರ, ಕನ್ನಡ ಹೋರಾಟಗಾರ ಶಿವನಗೌಡ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.