ಶನಿವಾರ, ಡಿಸೆಂಬರ್ 14, 2019
22 °C

ಅಭ್ಯರ್ಥಿಗಳನ್ನೇ ಹೊರಗಿಟ್ಟು ಬಿಜೆಪಿ ಮುಖಂಡರ ಸಭೆ: ಕುತೂಹಲದ ಬೆಳವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಮಹೇಶ ಕುಮಠಳ್ಳಿ ಮತ್ತು ಶ್ರೀಮಂತ ಪಾಟೀಲ ಅವರು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೋಮವಾರ ಬಂದಿದ್ದ ಪಕ್ಷದ ಮುಖಂಡರು ಪ್ರತ್ಯೇಕವಾಗಿ ಸಭೆ ನಡೆಸಿರುವುದು  ಕುತೂಹಲಕ್ಕೆ ಕಾರಣವಾಗಿದೆ.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಮನೆಯಲ್ಲಿ ನಡೆದಿರುವ ಸಭೆಯಲ್ಲಿ ಅಭ್ಯರ್ಥಿಗಳೇ ಇರಲಿಲ್ಲ. ಸಚಿವರಾದ ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಸಿ.ಸಿ. ಪಾಟೀಲ, ವಿಧಾನಪರಿಷತ್‌ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ, ಶಾಸಕ ಮುರುಗೇಶ ನಿರಾಣಿ ಮೊದಲಾದವರು ಪಾಲ್ಗೊಂಡು ಚರ್ಚಿಸಿದ್ದಾರೆ.

ಸಭೆಯ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹಬ್ಬಿವೆ.

ನಾಯಕರು ತಮ್ಮನ್ನು ಬಿಟ್ಟು ಪ್ರತ್ಯೇಕವಾಗಿ ಸಭೆ ನಡೆಸಿದ್ದು ಅಧಿಕೃತ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು