ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನರು‘

Last Updated 29 ಜುಲೈ 2021, 16:02 IST
ಅಕ್ಷರ ಗಾತ್ರ

ಮುಗಳಖೋಡ (ಬೆಳಗಾವಿ ಜಿಲ್ಲೆ): ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ನೆರೆಯಿಂದ ಹಾನಿಗೀಡಾದ ಕುಡಚಿ ಗ್ರಾಮೀಣ, ಖೇಮಲಾಪೂರ, ದಿಗ್ಗೇವಾಡಿ, ಗುಂಡವಾಡ, ಶಿರಗೂರ, ಚಿಕ್ಕೂಡ, ಹಾಲಶಿರಗೂರ ಗ್ರಾಮಗಳಿಗೆ ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ ಖೇತಗೌಡರ ಭೇಟಿ ನೀಡಿ ವೀಕ್ಷಿಸಿದರು.

ನಂತರ ಮಾತನಾಡಿ, ‘ಮಹಾರಾಷ್ಟ್ರದಲ್ಲಿ ಸುರಿದ ಮಹಾಮಳೆಗೆ ಕೃಷ್ಣಾ ನದಿ ಪಾತ್ರದ ಹಲವು ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. ಸಾಕಷ್ಟು ಜನರ ಮನೆಗಳು, ಹೊಲಗಳು ಮುಳುಡೆಯಾಗಿ ತುಂಬಾ ಹಾನಿ ಸಂಭವಿಸಿದೆ. ಜನರು ಸಂಕಷ್ಟದಲ್ಲಿದ್ದಾರೆ. ಹಲವು ಶಾಲೆಗಳಲ್ಲಿ ತೆರೆಯಲಾದ ಕಾಳಜಿ ಕೇಂದ್ರಗಳಲ್ಲಿ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಜನರಿಗೆ ತಲುಪಿಸುವಂತಹ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ’ ಎಂದರು.

ಕುಡಚಿ ಮಂಡಲದ ಪ್ರಧಾನ ಕಾರ್ಯದರ್ಶಿ ಮಲಗೌಡ ಪಾಟೀಲ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹಾಲಳ್ಳಿ, ಯುವ ಮೋರ್ಚಾ ಪದಾಧಿಕಾರಿಗಳಾದ ರಾಮಗೌಡ ಪಾಟೀಲ, ಚೇತನ್ ಬಿಜ್ಜರಗಿ, ಶೇಖರ ಪಾಟೀಲ, ಸಂದಿಪ ಬನಜವಾಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT