ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ತಿಗೇರಿ | ಬಿಜೆಪಿ ಗೆಲುವಿಗಾಗಿ ಶ್ರಮಿಸಲು ಕರೆ

Published 31 ಜನವರಿ 2024, 13:41 IST
Last Updated 31 ಜನವರಿ 2024, 13:41 IST
ಅಕ್ಷರ ಗಾತ್ರ

ಸತ್ತಿಗೇರಿ: ‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಿ, ನರೇಂದ್ರ ಮೋದಿ ಅವರನ್ನೇ ಪ್ರಧಾನಿಯಾಗಿ ಮುಂದುವರಿಸಲು ಕಾರ್ಯಕರ್ತರು ಶ್ರಮವಹಿಸಿ ದುಡಿಯಬೇಕು’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಹೇಳಿದರು.

ಗ್ರಾಮದ ದಲಿತ ಕಾಲೊನಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಮತ್ತೊಮ್ಮೆ ಮೋದಿ ಗೋಡೆ ಬರಹ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ನಿಲುವು ಖಂಡನೀಯ. ಈ ಬಾರಿ ಚುನಾವಣೆಯಲ್ಲಿ ಜನರು ಕಮಲಕ್ಕೆ ಮತ ನೀಡಬೇಕು’ ಎಂದು ಕೋರಿದರು.

ಪಕ್ಷದ ಮುಖಂಡ ವಿರೂಪಾಕ್ಷ ಮಾಮನಿ ಮಾತನಾಡಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಎಫ್.ಎಸ್.ಸಿದ್ದನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಯಲ್ಲಮ್ಮ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಜಗದೀಶ ಕೌಜಗೇರಿ, ಗುರು ವಾಲಿ, ಗೌಡಪ್ಪ ಸವದತ್ತಿ, ಮಹಾಂತೇಶ ಗೋಡಿ, ಎಂ.ಸಿ.ಜಯಪ್ರಕಾಶ, ಸಂದೀಪ ದೇಶಪಾಂಡೆ, ನಿತಿನ ಚೌಗಲೆ, ಸಂತೋಷ ದೇಶನೂರ, ಯಲ್ಲೇಶ ಕೋಲಕಾರ, ಪರ್ವತಗೌಡ ಪಾಟೀಲ, ಬಸನಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT