ಗುರುವಾರ , ಮೇ 13, 2021
19 °C

ದಿಢೀರ್‌ ಲಾಕ್‌ಡೌನ್‌: ಅಭಯ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರದಲ್ಲಿ ಅಧಿಕಾರಿಗಳು ಗುರುವಾರ ಭಾಗಶಃ ದಿಢೀರ್‌ ಲಾಕ್‌ಡೌನ್‌ ಜಾರಿ ಮಾಡಿರುವುದಕ್ಕೆ ಆಡಳಿತ ಪಕ್ಷ ಬಿಜೆಪಿ ಶಾಸಕ ಅಭಯ ಪಾಟೀಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸರ್ಕಾರವು ವ್ಯಾಪಾರ ಹಾಗೂ ವಹಿವಾಟುಗೆ ಸಂಬಂಧಿಸಿದಂತೆ ನಿಯಮಾವಳಿಗಳನ್ನು ದಿಢೀರನೆ ಜಾರಿಗೆ ತಂದಿರುವುದರಿಂದ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಅನಾನುಕೂಲ ಉಂಟಾಗುತ್ತಿದೆ. ಇದನ್ನು ಸಂಬಂಧಿಸಿದ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಯಾವುದೇ ಹೊಸ ಮಾರ್ಗಸೂಚಿ ಜಾರಿಗೆ ಮುನ್ನ ಜನರಿಗೆ ತಿಳಿಸಬೇಕು. ಅಧಿಕಾರಿಗಳು ಮನಸ್ಸಿಗೆ ಬಂದಂತೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರಿಯಲ್ಲ’ ಎಂದಿದ್ದಾರೆ.

‘ಕೊರೊನಾ ಬಗ್ಗೆ ಜನರಲ್ಲೂ ಜಾಗೃತಿ ಮೂಡಿದೆ. ಮುಂಚಿತವಾಗಿ ತಿಳಿಸಿ ಅನುಷ್ಠಾನಗೊಳಿಸಿದರೆ ಹೊಂದಿಕೊಳ್ಳುತ್ತಾರೆ. ಅಧಿಕಾರಿಗಳು ಮನಸ್ಸಿಗೆ ಬಂದಂತೆ ಮಾಡಬಾರದು’ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು