‘ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’

7
ಸಚಿವ ರಮೇಶ ಜಾರಕಿಹೊಳಿ ಹೇಳಿಕೆ

‘ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’

Published:
Updated:

ಬೆಳಗಾವಿ: ‘ಬಿಜೆಪಿ ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ’ ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯಾರ‍್ಯಾರು ಸಂಪರ್ಕದಲ್ಲಿ ಇದ್ದಾರೆ ಎನ್ನುವುದನ್ನು ಹೇಳಲಾಗದು’ ಎಂದು ತಿಳಿಸಿದರು. ಪಕ್ಷದಲ್ಲಿ ವ್ಯಕ್ತಿಪೂಜೆ ಮಾಡಬಾರದೆಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿಯಂತೆ. ಆ ರೀತಿ ವಿಶ್ಲೇಷಿಸುವವರಿಗೆ ನಾವೇನೂ ಮಾಡೋಕೆ ಆಗಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷಕ್ಕೆ ಉಪಕಾರ ಮಾಡಿದ್ದಾರೆ. ಉಪಕಾರ ಮಾಡಿದವರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಅದಕ್ಕಾಗಿ ನಾನು ಅವರನ್ನು ಭೇಟಿಯಾಗಲು ಧರ್ಮಸ್ಥಳಕ್ಕೆ ಹೋಗಿದ್ದೆ’ ಎಂದು ಹೇಳಿದರು.

ಹಿಂದಿನ ಸರ್ಕಾರದ ಯೋಜನೆಗಳನ್ನು ಮುಂದುವರಿಸಬೇಕು ಎನ್ನುವುದು ಸಿದ್ದರಾಮಯ್ಯ ಅವರ ಬಯಕೆಯಾಗಿತ್ತು. ಅದನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದಾರೆ. ಅವರು ಕೂಡ ಒಪ್ಪಿಕೊಂಡಿದ್ದು, ಯೋಜನಗಳು ಮುಂದುವರಿಯಲಿವೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕು. ಸಹೋದರ ಸತೀಶ ಜಾರಕಿಹೊಳಿ, ಎಂ.ಬಿ. ಪಾಟೀಲ, ಎಚ್‌.ಕೆ. ಪಾಟೀಲ ಅವರಿಗೆ ನೀಡಿದರೆ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !