ಶುಕ್ರವಾರ, ಆಗಸ್ಟ್ 12, 2022
20 °C

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದಿದ್ದು ಸರಿಯಲ್ಲ: ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಹಿರಂಗವಾಗಿ ಪತ್ರ ಬರೆಯುವುದು, ಅದನ್ನು ರಾಜ್ಯಪಾಲರಿಗಾಗಲಿ ಅಥವಾ ಪಕ್ಷದ ಮೇಲಿನವರಿಗಾಗಲಿ ಕಳುಹಿಸುವಂಥದು ಆಗಬಾರದಿತ್ತು. ಏನಿದ್ದರೂ ಮುಖ್ಯಮಂತ್ರಿ ಜೊತೆಯೇ ಚರ್ಚಿಸಬೇಕಿತ್ತು. ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಬೇಕಿತ್ತು. ಇದೆಲ್ಲವೂ ನಾಲ್ಕು ಗೋಡೆಗಳ ಒಳಗೆ ಆಗಬೇಕಾಗಿತ್ತು’ ಎಂದು ಪ್ರತಿಕ್ರಿಯಿಸಿದರು.

‘ನಾವೆಲ್ಲವೂ ಬಿ.ಎಸ್. ಯಡಿಯೂರಪ್ಪ ನಾಯಕತ್ವದಲ್ಲೇ ಹೊರಟಿದ್ದೇವೆ’ ಎಂದರು.

ಇದನ್ನೂ ಓದಿ... ಕಲ್ಯಾಣ ಕರ್ನಾಟಕದ ವಿರೋಧಿ ಮಲ್ಲಿಕಾರ್ಜುನ ಖರ್ಗೆ: ಬಿಜೆಪಿ ಟ್ವೀಟ್‌

‘ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರವು, ಉಪ ಚುನಾವಣೆಗಳ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದರು.

‘ಉಪ ಚುನಾವಣೆ ಬಳಿಕ ರಾಜಕೀಯ ಬದಲಾವಣೆ ಆಗುತ್ತದೆ’ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಕಾಂಗ್ರೆಸ್‌ನವರು ಇದನ್ನೇ ಹೇಳಿಕೊಂಡು ಬಂದಿದ್ದಾರೆ. ಅವರಿಗೆ ಯಾವುದೇ ವಿಷಯವಿಲ್ಲ. ಏನೂ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ತಿಳಿಸಿದರು.

ಇದನ್ನೂ ಓದಿ... ಆರ್‌ಎಸ್‌ಎಸ್, ಬಿಜೆಪಿ ಸಿದ್ಧಾಂತವು ವಿಷಕಾರಿ: ಮಲ್ಲಿಕಾರ್ಜುನ ಖರ್ಗೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು