ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬರುವ ಚುನಾವಣೆಗಳಿಗೆ ಸಿದ್ಧವಾಗಿ

ಕಾರ್ಯಕರ್ತರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೂಚನೆ
Last Updated 2 ನವೆಂಬರ್ 2020, 12:47 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಮುಂಬರಲಿರುವ ಚುನಾವಣೆಗಳಿಗೆ ಕಾರ್ಯಕರ್ತರು ಸಿದ್ಧವಾಗಬೇಕು’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೂಚಿಸಿದರು.

ಬಿಜೆಪಿಯ ಪ್ರಶಿಕ್ಷಣ ಪ್ರಕೋಷ್ಠದಿಂದ ಇಲ್ಲಿನ ಧರ್ಮನಾಥ ಭವನದಲ್ಲಿ ಸೋಮವಾರ ಆಯೋಜಿಸಿದ್ದ ‘ಪಕ್ಷದ ಬೆಳಗಾವಿ ಗ್ರಾಮಾಂತರ, ಮಹಾನಗರ ಹಾಗೂ ಚಿಕ್ಕೋಡಿ ಜಿಲ್ಲೆಗಳ ವಿಷಯ ಪ್ರಮುಖರ ಪ್ರಶಿಕ್ಷಣ ವರ್ಗ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಬೆಂಬಲಿಸಬೇಕು. ಅದಕ್ಕೂ ಮುನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು’ ಎಂದು ತಿಳಿಸಿದರು.

ಮತ್ತಷ್ಟು ಬೆಳೆಸಬೇಕು:‘ನರೇಂದ್ರ ಮೋದಿ ನೇತೃತ್ವದ ನಮ್ಮ ಸರ್ಕಾರ ಬಹಳಷ್ಟು ಯೋಜನೆಗಳನ್ನು ನೀಡಿದೆ. ರೈತರು, ಮಹಿಳೆಯರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಏನೆಲ್ಲ ಯೋಜನೆಗಳಿಗೆ ಎನ್ನುವುದನ್ನು ತಿಳಿದುಕೊಂಡು, ಅವುಗಳ ಲಾಭವನ್ನು ತಲುಪಿಸಲು ಸೇತುವೆಯಾಗಿ ನೀವು ಕಾರ್ಯನಿರ್ವಹಿಸಬೇಕು. ಈ ಮೂಲಕ ಪಕ್ಷದ ವರ್ಚಸ್ಸನ್ನು ಮತ್ತಷ್ಟು ಬೆಳೆಸಬೇಕು’ ಎಂದರು.

‘ಭೂ ಸೂಧಾರಣೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪಕ್ಷದವರು ರೈತರು ಹಾಗೂ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ತಿದ್ದುಪಡಿಯಿಂದ ಆಗುವ ಅನುಕೂಲಗಳೇನು ಎನ್ನುವುದನ್ನು ತಿಳಿಸಲು ಕಾರ್ಯಕರ್ತರು ಮುಂದಾಗಬೇಕು. ಪಕ್ಷದ ವಿವಿಧ ಮೋರ್ಚಾಗಳಿಂದಲೂ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

ಜಾಲತಾಣ ಬಳಸಿಕೊಳ್ಳಿ:‘ಹಿಂದೆ ಬಿಜೆಪಿಗೆ ಪದಾಧಿಕಾರಿಗಳ ನೇಮಕ ಹಾಗೂ ಚುನಾವಣೆ ಅಭ್ಯರ್ಥಿಗಳನ್ನು ಹುಡುಕಬೇಕಾಗುತ್ತಿತ್ತು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಸರ್ಕಾರದ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ, ‘ಬಿಜೆಪಿ ಪಕ್ಷದವರು ಎಂದರೆ ಕಲ್ಲು ಹೊಡೆಯುವಂತಹ ಪರಿಸ್ಥಿತಿ ಹಿಂದೆ ಇತ್ತು. ಮುಖಂಡರ ಕಾರುಗಳಿಗೆ ಕಾರ್ಯಕರ್ತರು ಪೆ‌ಟ್ರೋಲ್ ಹಾಕಿಸಿಕೊಡುವುದು ಹಾಗೂ ಸುರಕ್ಷಿತವಾಗಿ ಕಳುಹಿಸುತ್ತಿದ್ದ ದಿನಗಳಿದ್ದವು. ಆದರೆ ಈಗ ಪರಿಸ್ಥಿತಿ ಸಾಕಷ್ಟು ಬದಲಾವಣೆಯಾಗಿದೆ’ ಎಂದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಬಡವರಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು’ ಎಂದು ತಿಳಿಸಿದರು.

ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ‘ಕಾರ್ಯಕರ್ತರು ಅಧಿಕಾರ ಅಥವಾ ಯಾವುದೋ ಸ್ಥಾನಮಾನದ ಮೇಲೆ ಕಣ್ಣಿಟ್ಟು ಕೆಲಸ ಮಾಡಬೇಡಿ. ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಷ ಎಂದಿಗೂ ಕೈ ಬಿಡುವುದಿಲ್ಲ. ಇದಕ್ಕೆ ಬಹಳಷ್ಟು ಉದಾಹರಣೆಗಳು ನಮ್ಮ ಮುಂದಿವೆ. ನಾವು ಆದರ್ಶ ಇಟ್ಟುಕೊಂಡು ಕೆಲಸ ಮಾಡಬೇಕು’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT