‘ಕಾಂಗ್ರೆಸ್‌ನ ಗೂಂಡಾ ಆಡಳಿತಕ್ಕೆ ಸಾಕ್ಷಿ’
‘ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ’ ಎಂದು ಸಂಸದ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಈ ಘಟನೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಎತ್ತಿ ತೋರಿಸುತ್ತದೆ. ಅವರ ಕಾರಿನ ಮೇಲೆ ಮೊಟ್ಟೆ ಒಡೆದು ಶಾಹಿ ಹಾಕಿ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಾಂವಿಧಾನಿಕ ಹುದ್ದೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಗೌರವವಿದ್ದರೆ ಈ ಕೂಡಲೇ ನಾರಾಯಣಸ್ವಾಮಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು. ದಿಗ್ಬಂಧನ ವಿಧಿಸಿದ ಗೂಂಡಾಗಳ ಮೇಲೆ ಕಠಿಣ ಕ್ರಮ ಜರುಗಿಸಲಿ’ ಎಂದು ಆಗ್ರಹಿಸಿದ್ದಾರೆ. ‘ಭಯೋತ್ಪಾದಕರನ್ನು ಗೂಂಡಾಗಳನ್ನು ಬೆಂಬಲಿಸುವ ಇವರ ನಡೆಯು ಅತ್ಯಂತ ಖಂಡನೀಯ. ಈ ಮನಸ್ಥಿತಿಯನ್ನು ಇನ್ನಾದರೂ ಕಾಂಗ್ರೆಸ್ಸಿಗರು ಬದಲಾಯಿಸಿಕೊಳ್ಳಲಿ’ ಎಂದಿದ್ದಾರೆ.