ಶುಕ್ರವಾರ, ಡಿಸೆಂಬರ್ 4, 2020
24 °C

ಕಾರ್ಯಕಾರಿಣಿಗೆ ಬಿಜೆಪಿ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬಿಜೆಪಿಯಿಂದ ಡಿ. 5ರಂದು ನಗರದಲ್ಲಿ ಹಮ್ಮಿಕೊಂಡಿರುವ ರಾಜ್ಯ ಕಾರ್ಯಕಾರಿಣಿಗೆ ನಾಯಕರು ಪೂರ್ವ ಸಿದ್ಧತೆ ಆರಂಭಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಮುಖಂಡರಾದ ರಾಜು ಚಿಕ್ಕನಗೌಡರ, ಕಿರಣ ಜಾಧವ್ ಪಾಲ್ಗೊಂಡಿದ್ದರು.

ಕಾರ್ಯಕಾರಿಣಿಯಲ್ಲಿ ಮುಖ್ಯಮಂತ್ರಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಮೊದಲಾದ ಗಣ್ಯರು ಭಾಗವಹಿಸುವುದರಿಂದ ಆತಿಥ್ಯದಲ್ಲಿ ಕುಂದುಂಟಾಗದಂತೆ ನೋಡಿಕೊಳ್ಳಲು ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ನಿರ್ಧರಿಸಲಾಯಿತು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿಯ ಕಾರ್ಯಕಾರಿಣಿ ಮಹತ್ವ ಪಡೆದುಕೊಂಡಿದೆ. ಆದರೆ, ಯಾವ ಸ್ಥಳದಲ್ಲಿ ನಡೆಸಬೇಕು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಮತ್ತೊಂದು ಸುತ್ತಿನ ಸಭೆಯಲ್ಲಿ ಜಾಗ ಅಂತಿಮಗೊಳಿಸಲಾಗುವುದು ಎಂದು ‍ಪಕ್ಷದ ಮೂಲಗಳು ತಿಳಿಸಿವೆ. 2017ರಲ್ಲಿ ಧರ್ಮನಾಥ ಭವನದಲ್ಲಿ ಕಾರ್ಯಕಾರಿಣಿ ನಡೆಸಲಾಗಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು