ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಮಹಾನಗರಪಾಲಿಕೆ ಚುನಾವಣೆ: ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ–ಕಟೀಲ್

Last Updated 30 ಆಗಸ್ಟ್ 2021, 12:44 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿಕಣಕ್ಕಿಳಿದಿರುವ ಪಕ್ಷದ ಕಾರ್ಯಕರ್ತರನ್ನು ಉಚ್ಛಾಟಿಸಲಾಗುವುದು. ಮುಂದೆ ಅವರನ್ನು ಸೇರಿಸಿಕೊಳ್ಳುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು.

‘ಮನವೊಲಿಕೆ ಕಾರ್ಯ ಈಗಾಗಲೇ ಮುಗಿದಿದೆ. ಬಂಡಾಯವಾಗಿ ಸ್ಪರ್ಧಿಸಿರುವವರನ್ನು ವರದಿ ಪಡೆದು, ಆ.31ರಂದು ಉಚ್ಛಾಟಿಸಲಾಗುವುದು’ ಎಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಹೇಳಿದರು.

‘ಬೆಳಗಾವಿ, ಹುಬ್ಬಳ್ಳಿ–ಧಾರವಾಡ, ಕಲಬುರ್ಗಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ಅಲೆ ಇದೆ. ನಗರದಲ್ಲಿ ಇದೇ ಮೊದಲ ಬಾರಿಗೆ ಪಕ್ಷದಿಂದ ಚಿಹ್ನೆಯ ಮೇಲೆ ಸ್ಪರ್ಧಿಸಲಾಗುತ್ತಿದೆ. ಇಲ್ಲಿ 45 ಪ್ಲಸ್ ಸ್ಥಾನ ಗೆಲ್ಲುವ ವಾತಾವರಣ ಇದೆ. ಮತದಾರರು ನಮ್ಮ ಪರವಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ಕೊಡುಗೆ ನೆರವಾಗಿದೆ. ನಮ್ಮ ಶಾಸಕರು ಮಾಡಿದ ಅಭಿವೃದ್ಧಿ ಕಾರ್ಯವನ್ನು ಜನರು ಗಮನಿಸಿದ್ದಾರೆ’ ಎಂದರು.

‘ಹಿಂದೆ ಚುನಾವಣೆಗಳಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಹುಡುಕಬೇಕಾಗಿತ್ತು. ಆದರೆ, ಈಗ ಟಿಕೆಟ್‌ಗೆ ಬಹಳ ಬೇಡಿಕೆ ಬಂದಿದೆ. ಪಕ್ಷ ಬೆಳೆದಿದೆ. ಕಾರ್ಯಕರ್ತರು ಮುಖಂಡರಾಗಿದ್ದಾರೆ. ಇದು ಖುಷಿಯ ಸಂಗತಿ’ ಎಂದರು.

‘ಸಚಿವ ಉಮೇಶ ಕತ್ತಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಆ.31ರಿಂದ ಪ್ರಚಾರ ನಡೆಸುತ್ತಾರೆ. ಎಲ್ಲರೂ ಬರಬೇಕೆಂದೇನಿಲ್ಲ. ಮನೆಯಲ್ಲಿದ್ದರೂ ಮತ ತರುವಂತಹ ತಾಕತ್ತು ಅವರಿಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೋಕಾಕದಲ್ಲಿ ಅತಿ ಹೆಚ್ಚು ಮುನ್ನಡೆ ನಮ್ಮ ಪಕ್ಷಕ್ಕೆ ಸಿಕ್ಕದೆ’ ಎಂದು ಸಮರ್ಥಿಸಿಕೊಂಡರು.

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದರಾದ ಮಂಗಲಾ ಸುರೇಶ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾದೇವಪ್ಪ ಯಾದವಾಡ, ಮಹೇಶ ಕುಮಠಳ್ಳಿ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT