ಬೆಳಗಾವಿ: ‘ಗ್ರಾಮ ಪಂಚಾಯಿತಿಯಿಂದ ಹಿಡಿದು ವಿಧಾನಸೌಧದವರೆಗೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಕಯನ್ನೇ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಜ್ಜಾಗಬೇಕು’ ಎಂದು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಕರೆ ನೀಡಿದರು.

ಹಿಂಡಲಗಾದಲ್ಲಿ ಗುರುವಾರ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ನೂತನ ಕಾರ್ಯಾಲಯವು ಪಕ್ಷದ ಸಂಘಟನಾತ್ಮಕ ಕಾರ್ಯಚಟುವಟಿಕೆಗಳನ್ನು ಮಾಡಲು ಅನುಕೂಲವಾಗಲಿದೆ. ಕಾರ್ಯಕರ್ತರು ಇದನ್ನು ಬಳಸಿಕೊಳ್ಳಬೇಕು’ ಎಂದರು.

ಸಂಸದ ಜಗದೀಶ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಮುಖಂಡರಾದ ಎಂ.ಬಿ.ಜಿರಲಿ, ಗ್ರಾಮೀಣ ಮಂಡಲದ ಬಿಜೆಪಿ ಅಧ್ಯಕ್ಷ ಯುವರಾಜ್ ಜಾಧವ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ರಾಮಚಂದ್ರ ಮನ್ನೊಳಕರ, ಪ್ರಮುಖರು ಪಾಲ್ಗೊಂಡರು.

ಉಪಾಧ್ಯಾಯ ಜನ್ಮದಿನ: ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾವಚಿತ್ರಕ್ಕೆ ಸುಭಾಷ್ ಪಾಟೀಲ ಪುಷ್ಪ ನಮನ ಸಲ್ಲಿಸಿದರು. ಉಪಾಧ್ಯಾಯ ಅವರ ತ್ಯಾಗ ಹಾಗೂ ಸಂಘಟನಾ ಚಾತುರ್ಯದ ಬಗ್ಗೆ ಮುಖಂಡರು ಬಣ್ಣನೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.