ಬೆಳಗಾವಿ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಗೆಲುವಿನ ಸಂದರ್ಭ ಅವರ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ, ಇಲ್ಲಿನ ಕಾಂಗ್ರೆಸ್ ಭವನಕ್ಕೆ ಬುಧವಾರ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು, ‘ವಿಧಾನಸೌಧದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಇಂಥ ದೇಶ ವಿರೋಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.

ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಉಜ್ವಲಾ ಬಡವಣಾಚೆ, ಮಹಾದೇವ ಧರೆನ್ನವರ, ಮಹಾಮತೇಶ ಚಿನ್ನಪ್ಪಗೌಡರ ಇತರರಿದ್ದರು.

ನಂತರ ಅಲ್ಲಿಂದ ಕಾಂಗ್ರೆಸ್ ಭವನಕ್ಕೆ ನುಗ್ಗಲು ಹೊರಟಿದ್ದ ಕಾರ್ಯಕರ್ತರನ್ನು ಮರಾಠ ಮಂಡಳ ಕಾಲೇಜು ಬಳಿ ಪೊಲೀಸರು ತಡೆದರು. ಆಗ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಆಗ, ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.