ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಗೆಲ್ಲಿಸಿ, ಅಂಗಡಿಗೆ ಶ್ರದ್ಧಾಂಜಲಿ ಸಲ್ಲಿಸಿ: ಮಹೇಶ ಟೆಂಗಿನಕಾಯಿ

Last Updated 24 ಫೆಬ್ರುವರಿ 2021, 12:11 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ನಾವ್ಯಾರೂ ನಿರೀಕ್ಷಿಸಿರಲಿಲ್ಲ. ಬಿಜೆಪಿ ಅಭ್ಯರ್ಥಿಯನ್ನು ನಾಲ್ಕು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದಾಗ ಮಾತ್ರ ಇಲ್ಲಿನ ಸಂಸದರಾಗಿದ್ದ ಹಾಗೂ ಕೇಂದ್ರದಲ್ಲಿ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ಹೊರವಲಯದ ಸುವರ್ಣಗಾರ್ಡನ್ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಲೋಕಸಭಾ ಕ್ಷೇತ್ರದ ಆಯ್ದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿದೆ. ಆದರೆ, ಕಾರ್ಯಕರ್ತರು ಮೈಮರೆಯುವಂತಿಲ್ಲ’ ಎಂದು ತಿಳಿಸಿದರು.

‘ಪಕ್ಷದಿಂದ ಈಗಾಗಲೇ ಚುನಾವಣಾ ಕಾರ್ಯತಂತ್ರ ಸಿದ್ಧವಾಗಿದೆ. ಯಾವುದೇ ಕ್ಷಣದಲ್ಲಿ ಚುನಾವಣೆ ದಿನಾಂಕ ಘೋಷಣೆಯಾದರೂ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ’ ಎಂದರು.

‘ವಿವಿಧೆಡೆ ಸಮಾವೇಶ ನಡೆಸಿದ್ದರಿಂದಾಗಿ, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಸಾಧ್ಯವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲೂ ಪ್ರಮುಖರ ಸರಣಿ ಸಭೆಗಳನ್ನು ಆಯೋಜಿಸಲಾಗುವುದು’ ಎಂದು ತಿಳಿಸಿದರು.

ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ‘ಚುನಾವಣೆಯಲ್ಲಿ ಅಭ್ಯರ್ಥಿ ಮುಖ್ಯವಲ್ಲ. ಕಮಲದ ಚಿಹ್ನೆ ಮುಖ್ಯ ಎನ್ನುವುದನ್ನು ಕಾರ್ಯಕರ್ತರು ನೆನಪಿಡಬೇಕು’ ಎಂದು ಸೂಚಿಸಿದರು.

ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ರಾಜ್ಯ ಘಟಕದ ಕಾರ್ಯದರ್ಶಿ ಉಜ್ವಲಾ ಬಡವನಾಚೆ, ಜಿಲ್ಲಾ ‍ಪಂಚಾಯ್ತಿ ಸದಸ್ಯ ರಮೇಶ ದೇಶಪಾಂಡೆ, ಕಾಡಾ ಅಧ್ಯಕ್ಷ ಡಾ.ವಿ.ಐ. ಪಾಟೀಲ, ಮುಖಂಡರಾದ ಜಗದೀಶ ಮೆಟಗುಡ್, ರಾಜೇಂದ್ರ ಹರಕುಣಿ, ಧನಶ್ರೀ ದೇಸಾಯಿ, ಈರಣ್ಣ ಅಂಗಡಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೊಟ, ವಿಭಾಗ ಸಹ ಪ್ರಭಾರಿ ಬಸವರಾಜ ಯಕ್ಕಂಚಿ, ಪ್ರೇಮಾ ಭಂಡಾರಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಮೋಹಿತೆ, ಸಂದೀಪ ದೇಶಪಾಂಡೆ, ಗಿರೀಶ ದೊಂಗಡೆ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾ ಘಟಕದ ಮಾಧ್ಯಮ ಸಂಚಾಲಕ ಎಫ್.ಎಸ್. ಸಿದ್ದನಗೌಡರ, ಮಹಾನಗರ ಘಟಕದ ವಕ್ತಾರ ಹಣಮಂತ ಕೊಂಗಾಲಿ, ಶರದ್ ಪಾಟೀಲ, ರುದ್ರಣ್ಣ ಚಂದರಗಿ, ರಮೇಶ ಪರಿವಿನಾಯ್ಕರ, ಯುವರಾಜ ಜಾಧವ, ಈರಣ್ಣ ಚಂದರಗಿ, ಧನಂಜಯ ಜಾಧವ, ಜ್ಯೋತಿ, ಗುರುಪಾದ ಕಳ್ಳಿ, ಅಭಯ ಅವಲಕ್ಕಿ, ನಿತಿನ ಚೌಗಲೆ ಪಾಲ್ಗೊಂಡಿದ್ದರು.

ಮಹಾನಗರ ಘಟಕದ ಕಾರ್ಯದರ್ಶಿ ಮುರುಘೇಂದ್ರ ಪಾಟೀಲ ಸ್ವಾಗತಿಸಿದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ ನಿರೂಪಿಸಿದರು. ದಾದಾಗೌಡ ಪಾಟೀಲ‌ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT