ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ತು ಪಟ್ಟು ಹೆಚ್ಚಿನ ಬೆಲೆಗೆ ಕಪ್ಪು ಶಿಲೀಂಧ್ರ ಇಂಜೆಕ್ಷನ್ ಮಾರಾಟ: ಇಬ್ಬರ ಬಂಧನ

Last Updated 16 ಜೂನ್ 2021, 16:15 IST
ಅಕ್ಷರ ಗಾತ್ರ

ಬೆಳಗಾವಿ: ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಉಪಯೋಗಿಸುವ ₹ 310 ಬೆಲೆಯ 'ಆಂಫೊಟೆರಿಸಿನ್ ಬಿ' ಚುಚ್ಚುಮದ್ದನ್ನು ₹ 3 ಸಾವಿರ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳದ ತಯ್ಯಬ್ ನಯೂಮ್ ಮನಿಯಾರ್ (21) ಹಾಗೂ ಮುಜಾಫರ್ ಆರೀಫ್ ಪಠಾಣ (22) ಬಂಧಿತರು.

ಅವರಿಂದ 50 ಎಂಜಿಯ 28 ವಯಲ್ಸ್ ಅನ್ನು ವಶಕ್ಕೆ ಪಡೆಯಲಾಗಿದೆ. ಎರಡು ಮೊಬೈಲ್ ಫೋನ್‌ಗಳು ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಡಿಸಿಪಿ ವಿಕ್ರಂ ಅಮಟೆ ಮಾರ್ಗದರ್ಶನದಲ್ಲಿ ಔಷಧ ನಿಯಂತ್ರಣ ಅಧಿಕಾರಿಗಳು, ಸಿಇಎನ್ ಅಪರಾಧ ಠಾಣೆ ಇನ್‌ಸ್ಪೆಕ್ಟರ್ ಬಿ.ಆರ್. ಗಡ್ಡೇಕರ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವಿಕ್ರಂ ಅಮಟೆ ಮಾಹಿತಿ ನೀಡಿದ್ದಾರೆ.

ಬಂಧಿತರಿಂದ ವಶಪಡಿಸಿಕೊಳ್ಳಲಾದ ಔಷಧ
ಬಂಧಿತರಿಂದ ವಶಪಡಿಸಿಕೊಳ್ಳಲಾದ ಔಷಧ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT