ಬೆಳಗಾವಿ: ‘ಇಲ್ಲಿನ ಬಿಮ್ಸ್ ಸಂಸ್ಥೆ (ಜಿಲ್ಲಾಸ್ಪತ್ರೆ)ಯಲ್ಲಿ 26 ದಿನಗಳಲ್ಲಿ 100 ಕಪ್ಪು ಶಿಲೀಂದ್ರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ’ ಎಂದು ಪ್ರಭಾರ ನಿರ್ದೇಶಕ ಡಾ.ಉಮೇಶ ಕುಲಕರ್ಣಿ ತಿಳಿಸಿದ್ದಾರೆ.

ಈ ಬಗ್ಗೆ ಸೋಮವಾರ ಪ್ರಕಟಣೆ ನೀಡಿರುವ ಅವರು, ‘ಸಂಸ್ಥೆಯಲ್ಲಿ ಮೇ 26ರಂದು ಮೊದಲ ಪ್ರಕರಣ ವರದಿಯಾಗಿತ್ತು. ಮೇ 28ರಂದು ಮೊದಲ ಶಸ್ತ್ರಚಿಕಿತ್ಸೆ ನಿರ್ವಹಿಸಲಾಗಿತ್ತು. ಮೊದಲು ಸಿಬ್ಬಂದಿ ಕೊರತೆಯಿಂದ ದಿನಕ್ಕೆ 2ರಿಂದ 3 ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿತ್ತು’ ಎಂದಿದ್ದಾರೆ.

‘ನಂತರ ಪ್ರಾದೇಶಿಕ ಆಯುಕ್ತರು ಹಾಗೂ ಆಡಳಿತಾತ್ಮಕ ವ್ಯವಸ್ಥೆಯ ಮೇಲ್ತುವಾರಿ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಬೇರೆ ಸಂಸ್ಥೆಗಳಿಂದ ಇ.ಎನ್.ಟಿ. ವೈದ್ಯರನ್ನು, ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡಿಸಿ ಸಹಕರಿಸಿದ್ದಾರೆ. ಇದರಿಂದ ಸದ್ಯ ನಿತ್ಯ ಸರಾಸರಿ 6 ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

‘ಸದ್ಯ 95 ರೋಗಿಗಳು ದಾಖಲಾಗಿದ್ದು, 60 ರೋಗಿಗಳಿಗೆ ಕಣ್ಣಿನ ಬಳಿ ಸಮಸ್ಯೆ (ಐ ಇನ್‌ವಾಲ್ವ್‌ಮೆಂಟ್) ಕಂಡುಬಂದಿದೆ. 35 ರೋಗಿಗಳಿಗೆ ಕಣ್ಣಿನ ಬಳಿ ಚುಚ್ಚುಮದ್ದು ನೀಡಿದ್ದು, ಅವರೆಲ್ಲರ ದೃಷ್ಟಿಯಲ್ಲಿ ಸುಧಾರಣೆ ಕಂಡುಬಂದಿದೆ. ಸಂಸ್ಥೆಯ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸರ್ಕಾರಿ ಶುಶ್ರೂಷಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಕೋವಿಡ್ ರೋಗಿಗಳಿಗೆ ಯೋಗಾಭ್ಯಾಸ ಮಾಡಿಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.