ಗುರುವಾರ , ಜೂನ್ 24, 2021
23 °C

ಸಂಕೇಶ್ವರದ ವ್ಯಕ್ತಿಗೆ ಬ್ಲ್ಯಾಕ್ ಫಂಗಸ್: ಬಿಜೆಪಿ ವಕ್ತಾರ ಎಂ.ಬಿ. ಝಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದ ವ್ಯಕ್ತಿಯೊಬ್ಬರಲ್ಲಿ ಅಪಾಯಕಾರಿ ಶಿಲೀಂಧ್ರ ಸೋಂಕು (ಬ್ಲ್ಯಾಕ್‌ ಫಂಗಸ್‌) ಪತ್ತೆಯಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ತಿಳಿಸಿದರು.

‘ವಿಷಯವನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಕೋವಿಡ್ ಜೊತೆಗೆ ಶಿಲೀಂಧ್ರ ಸೋಂಕು ಕೂಡ ಬಾಧಿಸುತ್ತಿರುವುದು ಆತಂಕ ಮೂಡಿಸಿದೆ. ಈ ಸಂದರ್ಭದಲ್ಲಿ ವಿರೋಧ ಪಕ್ಷದವರು ಆರೋಪಗಳಲ್ಲಿ ತೊಡಗುವ ಬದಲಿಗೆ ಜವಾಬ್ದಾರಿಯಿಂದ ವರ್ತಿಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಕೋರಿದರು.

ಇದನ್ನೂ ಓದಿ: 

‘ಬ್ಲ್ಯಾಕ್‌ ಫಂಗಸ್‌ ಸಮಸ್ಯೆ ಗಂಭೀರವಾದುದೇನಲ್ಲ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆ ಸೋಂಕು ಬಂದಿರುವುದು ನಮ್ಮಲ್ಲಿ ವರದಿಯಾಗಿಲ್ಲ’ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು