ಮಂಗಳವಾರ, ಜುಲೈ 27, 2021
21 °C

ಅಥಣಿ ಆಸ್ಪತ್ರೆಯಲ್ಲಿ ರಕ್ತ ದಾನ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ (ಬೆಳಗಾವಿ ಜಿಲ್ಲೆ): ‘ಕೋವಿಡ್ ಸಂದರ್ಭದಲ್ಲಿ ರಕ್ತದ ಕೊರತೆಯಾಗಿ ಅನೇಕ ರೋಗಿಗಳು ತೊಂದರೆ ಅನುಭವಿಸಿದರು. ಹೀಗಾಗಿ, ದಾನಿಗಳು ರಕ್ತ ನೀಡಲು ಮುಂದೆ ಬರಬೇಕು’ ಎಂದು ಟಿಎಚ್‌ಒ ಡಾ.ಬಸಗೌಡ ಕಾಗೆ ಕೋರಿದರು.

ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ, ಬಿಮ್ಸ್‌ ರಕ್ತನಿಧಿ ಕೇಂದ್ರ, ಎಡಿಎಚ್‌ಒ ಕಚೇರಿ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತ ದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವುದರಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ’ ಎಂದು ತಿಳಿಸಿದರು.

30 ಮಂದಿ ರಕ್ತ ದಾನ ಮಾಡಿದರು. ಡಾ.ಸಿ.ಎಸ್. ಪಾಟೀಲ, ಡಾ.ಹಣಮಂತ ಕನಮಡಿ, ಡಾ.ರೋಹಿತ್, ಸುರೇಶ ವಾಲೀಕಾರ, ಸಂಧ್ಯಾ ನಾಯಿಕ, ಎ.ಬಿ. ಗುಳಿಧರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು