ಭಾನುವಾರ, ಏಪ್ರಿಲ್ 11, 2021
29 °C

ರಕ್ತ ದಾನಕ್ಕೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ವೈದ್ಯಕೀಯ ವಿಜ್ಞಾನದಲ್ಲಿ ಪರಿಹಾರ ಕಂಡುಹಿಡಿಯಲಾಗಿದೆ. ಆದರೆ, ರಕ್ತ ತಯಾರಿಸುವ ವಿಧಾನ ಮಾತ್ರ ಸಾಧ್ಯವಾಗಿಲ್ಲ. ಹೀಗಾಗಿ, ಆರೋಗ್ಯವಂತರೆಲ್ಲರೂ ರಕ್ತ ದಾನ ಮಾಡಿ ಸಂಕಷ್ಟದಲ್ಲಿ ಇರುವವರಿಗೆ ನೆರವಾಗಬೇಕು’ ಎಂದು ಒರಿಯನ್ ಹೈಡ್ರಾಲಿಕ್ ಪ್ರೈ.ಲಿ. ಜಂಟಿ ಕಾರ್ಯನಿರ್ವಾಹಕ ನಿರ್ದೇಶಕ ಮಚಾಡೊ ಹೇಳಿದರು.

ಒರಿಯನ್ ಹೈಡ್ರಾಲಿಕ್ ಕಂಪನಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದದರು.

‘ದಾನದಿಂದ ಮಾತ್ರ ರಕ್ತ ಸಂಗ್ರಹಿಸಲು ಸಾಧ್ಯ. ಇನ್ನೊಬ್ಬರ ಜೀವ ಉಳಿಸಲು ಸಹಕರಿಸಿ, ಮಾನವೀಯತೆ ತೋರಬೇಕು. ಈ ದಾನ ಎಲ್ಲಕ್ಕಿಂತಲೂ ಶ್ರೇಷ್ಠವಾದುದು’ ಎಂದರು.

ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ರಕ್ತ ಭಂಡಾರದ ಮುಖ್ಯಸ್ಥ ಡಾ.ಎಸ್.ವಿ. ವಿರಗಿ, ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಪ್ರವೀಣ ವಾಗ್ಮೋಡೆ ಇದ್ದರು.

85 ಮಂದಿ ರಕ್ತದಾನ ಮಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.