ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ರಕ್ತ ದಾನ ಶಿಬಿರ’

Last Updated 16 ಸೆಪ್ಟೆಂಬರ್ 2021, 8:22 IST
ಅಕ್ಷರ ಗಾತ್ರ

ಬೆಳಗಾವಿ: ‘ಗ್ರಾಮೀಣ ಯುವ ಸಮುದಾಯವು ಸ್ವಯಂಪ್ರೇರಿತವಾಗಿ ಪಾಲ್ಗೊಳ್ಳುವುದಕ್ಕೆ ಸ್ಫೂರ್ತಿ ನೀಡುವುದಕ್ಕಾಗಿ ಗ್ರಾಮ ಪಂಚಾಯ್ತಿಗಳ ಮಟ್ಟದಲ್ಲಿ ಸ್ವಯಂಪ್ರೇರಿತ ರಕ್ತ ದಾನ ಶಿಬಿರಗಳನ್ನು ಆಯೋಜಿಸಲಾಗುವುದು’ ಎಂದು ಜಿ.ಪಂ. ಸಿಇಒ ಎಚ್‌.ವಿ. ದರ್ಶನ್‌ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಕಾರ್ಯಾಲಯದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತ ದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಅನಿಲ ಮಾತನಾಡಿ, ‘ಕೊರೊನಾ ವೈರಾಣುವಿನ ಪರಿಣಾಮದಿಂದ ಜಿಲ್ಲೆಗಳಲ್ಲಿ ರಕ್ತದ ಕೊರತೆ ಉಂಟಾಗಬಾರದು. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ರಕ್ತ ನಿಧಿ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು. ಇದಕ್ಕೆ ಸ್ಥಳೀಯ ಸರ್ಕಾರಿ ಹಾಗೂ ಸರ್ಕಾರೇತರ ರಕ್ತ ನಿಧಿ ಕೇಂದ್ರಗಳು, ಲಯನ್ಸ್, ರೆಡ್‌ಕ್ರಾಸ್ ಸಂಸ್ಥೆ, ರೋಟರಿ ಕ್ಲಬ್, ವಿವಿಧ ಕಾಲೇಜುಗಳು, ಸಾಮಾಜಿಕ ಸಂಘ ಸಂಸ್ಥೆಗಳು, ಯುವ ಸಂಘಟನೆಗಳು, ರೆಡ್ ರಿಬ್ಬನ್ ಕ್ಲಬ್‌ಗಳು ಕೈಜೋಡಿಸಬೇಕು’ ಎಂದು ಹೇಳಿದರು.

ಡಿಎಚ್‌ಒ ಡಾ.ಎಸ್.ವಿ. ಮುನ್ನಾಳ, ಜಿಲ್ಲಾಸ್ಪತ್ರೆ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಆರ್.ಜಿ. ಪಾಟೀಲ, ಡಾ.ಶಕುಂತಲಾ, ಜಿಲ್ಲಾ ಮೇಲ್ವಿಚಾರಕರಾದ ಕೆ.ಎನ್. ಜಹಾಂಗೀರದಾರ, ಎಂ.ಎಂ. ಸನದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT