ಶುಕ್ರವಾರ, ಜುಲೈ 30, 2021
25 °C

ಬೆಳಗಾವಿ: ನದಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ತಾಲ್ಲೂಕಿನ ಕಾಕತಿ ಸಮೀಪದಲ್ಲಿ ಮಾರ್ಕಂಡೇಯ ನದಿ ಪ್ರವಾಹದಲ್ಲಿ ಶುಕ್ರವಾರ ಸಂಜೆ ಕೊಚ್ಚಿ ಹೋಗಿದ್ದ ವ್ಯಕ್ತಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ.

ಸಿದ್ರಾಯಿ ದೊಡ್ಡರಾಮ ಸುತಗಟ್ಟಿ (65) ಮೃತರು. ಅವರು ನೀರು ಪಾಲಾಗಿದ್ದ ಸ್ಥಳದಿಂದ ಮೂರು ಕಿ.ಮೀ. ದೂರದ ದರ್ಗಾ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಎಸ್‍ಡಿಆರ್‌ಎಫ್, ಅಗ್ನಿಶಾಮಕ ದಳ, ವಾಲ್ಮೀಕಿ ಯುವ ಸಂಘದವರು ಕಾರ್ಯಾಚರಣೆ ನಡೆಸಿದ್ದಾರೆ.

ಜಮೀನಿಗೆ ತೆರಳಿದ್ದ ಸಿದ್ರಾಯಿ ಅಲ್ಲಿನ ಕೆಲಸ ಮುಗಿಸಿ ವಾಪಸಾಗುವಾಗ ಕಾಕತಿ ಬಳಿಯ ಸೇತುವೆ ಸಮೀಪ ಕೈ–ಕಾಲು ತೊಳೆಯಲು ನದಿಗಿಳಿದಿದ್ದರು. ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಪೊಲೀಸರು ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ, ವಾರಸುದಾರರಿಗೆ ಮೃತದೇಹ ಹಸ್ತಾಂತರಿಸಿದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು