ಭಾನುವಾರ, ನವೆಂಬರ್ 27, 2022
26 °C

ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಮಹಾಂತೇಶ ನಗರದಲ್ಲಿ ಬುಧವಾರ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಮಹಾಂತೇಶ ನಗರದ ಕಣಬರ್ಗಿ ರಸ್ತೆಯ ಪಕ್ಕದಲ್ಲಿಯೇ ಮರಕ್ಕೆ ಶವ ನೇತಾಡುವುದನ್ನು ಪಾದಚಾರಿಗಳು ಗಮನಿಸಿದರು. ವ್ಯಕ್ತಿ ಧರಸಿದ್ದ ಶರ್ಟ್‌, ಬನಿಯನ್‌ಗಳನ್ನೇ ನೇಣಿಗೆ ಬಳಸಲಾಗಿದೆ. ಘಟನೆ ಮಂಗಳವಾರ ರಾತ್ರಿ ನಡೆದಿದೆ. ಈ ಸಾವು ಅನುಮಾನಾಸ್ಪದವಾಗಿದ್ದು, ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಬಳಿಕ ಸಾವಿನ ಕಾರಣ ತಿಳಿಯಲಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಳಮಾರುತಿ ಪಿಎಸ್ಐ ಹೊನ್ನಪ್ಪ ತಳವಾರ ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು