ಗುರುವಾರ , ಅಕ್ಟೋಬರ್ 28, 2021
18 °C

ಬೆಳಗಾವಿ: ಅಂಗಾಗ, ದೇಹ ದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಮಹಾಂತೇಶ ನಗರದ ನಿವಾಸಿ, ಮೂಲತಃ ತಿಗಡಿ ಗ್ರಾಮದ ಜಗದೀಶ ಶಿವಬಸಪ್ಪ ಜಕಾತಿ (81) ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್‌ ವತಿಯಿಂದ ನೇತ್ರ, ಚರ್ಮ ಹಾಗೂ ದೇಹ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಅಂತಿಮ ಇಚ್ಛೆಯಂತೆ ಕಣ್ಣುಗಳನ್ನು ಕೆಎಲ್‌ಇ ಪ್ರಭಾಕರ ಕೋರೆ ನೇತ್ರ ಭಂಡಾರಕ್ಕೆ, ಚರ್ಮವನ್ನು ಕೆಎಲ್‌ಇ–ರೋಟರಿ ಚರ್ಮ ಬ್ಯಾಂಕ್‌ಗೆ ಮತ್ತು ದೇಹವನ್ನು ವೈದ್ಯಕೀಯ ವಿದ್ಯಾರ್ಥಿಗಳ ಜ್ಞಾನಾರ್ಜನೆಗಾಗಿ ಕೆಎಲ್‌ಇ ಹೋಮಿಯೋಪತಿ ವೈದ್ಯಕೀಯ ಕಾಲೇಜಿಗೆ ದಾನ ನೀಡಲಾಯಿತು.

ಕೆಎಲ್‌ಇ ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರದ ಡಾ.ಅರವಿಂದ ತೇಣಗಿ, ಚರ್ಮ ಭಂಡಾರದ ಡಾ.ರಾಜೇಶ ಪವಾರ, ಕೆಎಲ್‌ಇ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ.ಮುಕುಂದ ಉಡಚನಕರ, ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್‌ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ದಾನದ ಪ್ರಕ್ರಿಯೆಯನ್ನು ನಿರ್ವಹಿಸಿದರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು