ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನ ವೇಳೆ, ಗಡಿಭಾಗದ ವಿವಿಧ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರೊಂದಿಗೆ ಚರ್ಚಿಸಲು, ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ನಡೆದ ಕನ್ನಡ ಸಂಘಟನೆಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮತ್ತು ಗಡಿ ಸಂರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿ ಸ್ಥಾಪನೆ, ಸೌಧದ ಎದುರು ಭುವನೇಶ್ವರಿ ದೇವಿ ಪ್ರತಿಮೆ ಪ್ರತಿಷ್ಠಾಪನೆ, ನಾಮಫಲಕ ವಿಷಯದಲ್ಲಿ ಕನ್ನಡ ಅನುಷ್ಠಾನ ಮತ್ತಿತರ ವಿಷಯ ಕುರಿತು ಚರ್ಚಿಸಲಾಯಿತು.

ಅಶೋಕ ಚಂದರಗಿ ಅಧ್ಯಕ್ಷತೆ ವಹಿಸಿದ್ದರು. ಮಹಾದೇವ ತಳವಾರ, ವಾಜೀದ್ ಹಿರೇಕೋಡಿ, ಶ್ರೀನಿವಾಸ ತಾಳೂಕರ, ಬಲರಾಮ ಮಾಸೇನಟ್ಟಿ, ರಾಜು ಕೋಲಾ, ಆನಂದ ಬಿಲಾವರ, ಸಂತೋಷ ಮಾಸೇನಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.