ಅಥಣಿ (ಬೆಳಗಾವಿ ಜಲ್ಲೆ): ಪಟ್ಟಣದ ಶಂಕರ ನಗರದಲ್ಲಿ ಭಾನುವಾರ ಬೆಳಿಗ್ಗೆ ಟ್ಯೂಷನ್ ಮುಗಿಸಿ ರಸ್ತೆ ಬದಿಯಲ್ಲಿ ಸಹಪಾಠಿಗಳೊಂದಿಗೆ ಮೂತ್ರ ವಿಸರ್ಜನೆಗೆ ನಿಂತಿದ್ದ ಬಾಲಕನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳೀಯ ನಿವಾಸಿ ಸೃಜನ್ ಸುನೀಲ್ ಭಂಡಗರ (10) ಮೃತ ಬಾಲಕ. ಇನ್ನುಳಿದ ಹಲವು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

‘ಅಥಣಿ ಮಾರ್ಗವಾಗಿ ಕಾರವಾರಕ್ಕೆ ಹೊರಟಿದ್ದ ಸರ್ಕಾರಿ ಬಸ್ ಅತಿ ವೇಗವಾಗಿ ಚಲಿಸುತ್ತಿತ್ತು. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ’ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.