ಭಾನುವಾರ, ಆಗಸ್ಟ್ 1, 2021
28 °C

ಲಂಚ: ಪಿಎಸ್‌ಐ, ಇಬ್ಬರು ಕಾನ್‌ಸ್ಟೆಬಲ್‌ಗಳು ಎಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಪಾನ್‌ಮಸಾಲಾ ಕಾರ್ಖಾನೆ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಠಾಣೆಯ ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ಕಾನ್‌ಸ್ಟೆಬಲ್‌ಗಳಾದ ಮಾಯಪ್ಪ ಗಡ್ಡೆ ಮತ್ತು ಶ್ರೀಶೈಲ ಮಂಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಗುರುವಾರ ಬಿದ್ದಿದ್ದಾರೆ.

ಮಹಾರಾಷ್ಟ್ರದಿಂದ ರಾಜ್ಯದ ಬೋರಗಾಂವಕ್ಕೆ ಬಂದಿರುವ ಕಂಪನಿಯವರಿಗೆ, ‘ನೀವು ಅನಧಿಕೃತವಾಗಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ’ ಎಂದು ಹೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಇಚಲಕರಂಜಿ ಮೂಲದ ರಾಜು ಪಾಶ್ಚಾಪುರೆ ಎನ್ನುವವರು ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಪೊಲೀಸ್ ಠಾಣೆಯಲ್ಲಿ ₹40 ಸಾವಿರ ಲಂಚ ಪಡೆಯುವಾಗ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಎಸಿಬಿ ಎಸ್ಪಿ ಬಿ.ಎಸ್. ನ್ಯಾಮಗೌಡರ ಮಾರ್ಗದರ್ಶನ ಮತ್ತು ಡಿವೈಎಸ್ಪಿ ಜೆ.ಎಂ. ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಎಚ್‌. ಸುನೀಲ್‌ಕುಮಾರ್, ಎ.ಎಸ್. ಗುದಿಗೊಪ್ಪ, ಅಲಿ ಶೇಖ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು