ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಬಿಮ್ಸ್‌ಗೆ ಸಮರ್ಪಿಸಿದ ಯಡಿಯೂರಪ್ಪ

Last Updated 25 ಆಗಸ್ಟ್ 2020, 7:10 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್-19ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.

ಇಲ್ಲಿನ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ತಮ್ಮ ನಿಧಿಯಿಂದ ಈ ಉಪಕರಣಗಳನ್ನು ಖರೀದಿಸಲಾಗಿದೆ.

‘ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಪಾಟೀಲ ಅವರು ಈ ಉಪಕರಣಗಳಿಗೆ ಅನುದಾನ ನೀಡಿದ್ದಾರೆ. ಇದೇ ರೀತಿ ಉಳಿದ ಕ್ಷೇತ್ರದ ಶಾಸಕರೂ ಈ ರೀತಿಯ ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ನೀಡಬೇಕು’ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಇದಕ್ಕೆ ಸಂಬಂಧಿಸಿದಂತೆ ವತಿಯಿಂದ ಸುತ್ತೋಲೆ ಕೂಡ ಹೊರಡಿಸಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT