ಶುಕ್ರವಾರ, ಮೇ 14, 2021
31 °C

ಸೋಲುವ ಭಯವಲ್ಲ, ಹೊಣೆಗಾರಿಕೆಯಿಂದ ಪ್ರಚಾರ ಮಾಡುತ್ತಿದ್ದೇನೆ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ನಾನು ಪದೇ ಪದೇ ಪ್ರಚಾರ ನಡೆಸಲು ಬರುತ್ತಿಲ್ಲ. ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಶ್ರಮಿಸುತ್ತಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಇಲ್ಲಿ ಬುಧವಾರ ಹೇಳಿದರು.

ಅವರ ಪಕ್ಷದ ಅಭ್ಯರ್ಥಿ ಸೋಲುವ ಭೀತಿಯಿಂದಾಗಿ ಮುಖ್ಯಮಂತ್ರಿ ಆಗಾಗ ಪ್ರಚಾರ ನಡೆಸುತ್ತಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಹೆಚ್ಚು ಉತ್ತರ ಕೊಡುವುದಿಲ್ಲ ಎಂದರು.

ಕೋವಿಡ್- 19 ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಏ.18ರಂದು ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ. ಎಲ್ಲರೊಂದಿಗೂ ಚರ್ಚಿಸಿ, ಕೊರೊನಾ ರಾತ್ರಿ ಕರ್ಫ್ಯೂ ಅನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸಲು ಯೋಚಿಸಲಾಗುತ್ತಿದೆ. ಜನರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ‌ವಹಿಸಬೇಕು ಎಂದು ಕೋರಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು