ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ| ಬಸ್‌– ಬೈಕ್‌ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

Last Updated 18 ಮಾರ್ಚ್ 2023, 15:41 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿ ಹೊರವಲಯದಲ್ಲಿ ಶನಿವಾರ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಯಬಾಗ ತಾಲ್ಲೂಕಿನ ಹಾಲಶಿರಗೂರು ಗ್ರಾಮದವರಾದ ಭಗವಂತ ಶಿವರಾಯ ಕಾಂಬಳೆ (45), ವಿಶ್ವನಾಥ ಎಸ್‌. ಕಾಂಬಳೆ (24) ಹಾಗೂ ಕುಮಾರ ಬಾಳಪ್ಪ ಕಾಂಬಳೆ (35) ಮೃತಪಟ್ಟವರು. ಮೂವರೂ ಸಹೋದರ ಸಂಬಂಧಿಗಳಾಗಿದ್ದಾರೆ.

ಸರ್ಕಾರಿ ಬಸ್‌ ಹಾಲಗಿ ಕಡೆಯಿಂದ ಸಾಂಗ್ಲಿ ಕಡೆಗೆ ಹೊರಟಿತ್ತು. ಮೂವರೂ ಸಹೋದರ ಸಂಬಂಧಿಗಳು ಒಂದೇ ಬೈಕಿನಲ್ಲಿ ಹಾಲಶಿರಗೂರು ಕಡೆಗೆ ಹೊರಟಿದ್ದರು. ಹಾರೂಗೇರಿ– ಕುಡಚಿ ಹೆದ್ದಾರಿ ಮೇಲೆ ವೇಗವಾಗಿ ಬಂದ ವಾಹನಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದವು.

ಬಸ್ಸಿನ ಚಕ್ರಕ್ಕೆ ಸಿಲುಕಿದ ಮೂವರೂ ಸಹೋದರು ಸ್ಥಳದಲ್ಲೇ ಕೊನೆಯುಸಿರೆಳೆದರು. ಅಪಘಾತ ತ‍ಪ್ಪಿಸಲು ಬಸ್‌ ಚಾಲಕ ವಾಹನವನ್ನು ರಸ್ತೆ ಬದಿಗೆ ಇಳಿಸಿದರು. ಕೂದಲೆಳೆ ಅಂದರದಲ್ಲಿ ಬಸ್‌ ಪಲ್ಟಿಯಾಗುವುದು ತಪ್ಪಿತು ಎಂದು ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಕುಡಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT