ಶನಿವಾರ, ಆಗಸ್ಟ್ 24, 2019
28 °C

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ | ಹಲವು ಮಾರ್ಗದಲ್ಲಿ ಬಸ್ ಸಂಚಾರ ಸ್ಥಗಿತ

Published:
Updated:

ಬೆಳಗಾವಿ: ಜಿಲ್ಲೆಯಾದ್ಯಂತ ಹಾಗೂ ನೆರೆಯ ಮಹಾರಾಷ್ಟ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿ ರಸ್ತೆಗಳು ಕುಸಿದಿರುವುದರಿಂದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೆಲವು ಮಾರ್ಗಗಳಲ್ಲಿ ಬಸ್‌ಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದೆ.

ಖಾನಾಪುರ ತಾಲ್ಲೂಕು, ಗೋವಾ, ಕೊಲ್ಹಾಪುರ, ವಿಜಯಪುರ, ಗೋಕಾಕ, ಹಿಡಕಲ್, ಪಾಶ್ಚಾಪುರ, ಧಾರವಾಡ, ಹುಬ್ಬಳ್ಳಿ ಹಾಗೂ ಬೆಳಗಾವಿ ಉಪನಗರ ವ್ಯಾಪ್ತಿಯಲ್ಲಿ ಬಸ್‌ಗಳು ಸಂಚರಿಸುತ್ತಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ರಸ್ತೆ ಸಂಪರ್ಕ ಹೊಂದಿರುವ ಮಾರ್ಗಗಳಲ್ಲಿ ಕಾರ್ಯಾಚರಣೆಗೆ ಕ್ರಮ ವಹಿಸಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ನೆರೆ ಹಾವಳಿ ಭೀತಿ ಕಡಿಮೆ ಆಗುವವರೆಗೆ ಸಹಕರಿಸಬೇಕು’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿ ಮೊ: 7760991612, 7760991613, 7760991642, 7760991635 ಸಂಪರ್ಕಿಸಬಹುದು ಎಂದು ಕೋರಿದ್ದಾರೆ.

Post Comments (+)