ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚಿಸಲು ನ. 21ರಂದು ಸಭೆ ಜರುಗಲಿದೆ. ಕೆಪಿಸಿಸಿಯಿಂದ ನೇಮಿಸಿದ ಸಮಿತಿಯು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದರು.

ಇಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಮಿತಿಗೆ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಸಂಯೋಜಕರಾಗಿದ್ದಾರೆ. ಎಲ್. ಹನುಮಂತಯ್ಯ, ಎಚ್.ಎಂ. ರೇವಣ್ಣ, ವೀರಕುಮಾರ ಎ.ಪಾಟೀಲ, ಅಜಯಕುಮಾರ್ ಸರ್‌ನಾಯಕ್, ಅನಿಲ್ ಲಾಡ್, ಜಿ.ಎಸ್. ಪಾಟೀಲ, ಬಸವರಾಜ ಶಿವಣ್ಣನವರ, ಶ್ರೀನಿವಾಸ ವಿ. ಮಾನೆ, ನಾಗರಾಜ್ ಚೆಬ್ಬಿ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ. ಅವರು ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಾಲೋಚಿಸಿ, ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಿ, ಶಿಫಾರಸು ಸಮೇತ ಕೆಪಿಸಿಸಿಗೆ ಸಲ್ಲಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.