ಸೋಮವಾರ, ಫೆಬ್ರವರಿ 17, 2020
29 °C

ಬೆಳಗಾವಿ| ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹೆಬ್ಬಾಳ ಜಿಲ್ಲಾ ಪಂಚಾಯಿತಿ, ರಾಮದುರ್ಗ ತಾಲ್ಲೂಕಿನ ಕಟಕೋಳ ತಾಲ್ಲೂಕು ಪಂಚಾಯಿತಿ ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 43 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗದ ಆದೇಶದ ಅನ್ವಯ ಉಪ ಚುನಾವಣೆ ನಡೆಯಲಿದೆ.

ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸುವುದು ಜ. 25ರಂದು. ನಾಮಪತ್ರ ಸಲ್ಲಿಸಲು ಕೊನೆಯ ದಿನ ಜ. 28. ಪರಿಶೀಲಿಸುವ ದಿನ ಜ.26. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ ಜ. 31. ಮತದಾನ ಅವಶ್ಯವಿದ್ದರೆ ಫೆ. 9ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದರೆ ಫೆ. 10ರಂದು ನಡೆಯಲಿದೆ. ಮತಗಳ ಎಣಿಕೆಯನ್ನು ಫೆ. 11ರಂದು ಬೆಳಿಗ್ಗೆ 8ರಿಂದ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ನಡೆಸಲಾಗುವುದು.

ಜ. 25ರಂದು 4ನೇ ಶನಿವಾರವಾಗಿದ್ದು, ಅದು ಸಾರ್ವತ್ರಿಕ ರಜಾ ದಿನವಲ್ಲದ ಕಾರಣ ಅಂದು ಚುನಾವಣಾಧಿಕಾರಿ ಕಚೇರಿಯಲ್ಲಿ ಹಾಜರಿದ್ದು ನಾಮಪತ್ರಗಳನ್ನು ಸ್ವೀಕರಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಮೀಸಲಾತಿ ವಿವರ:

ಹೆಬ್ಬಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರ: ಹಿಂದುಳಿದ ‘ಬಿ’ ವರ್ಗ.

ಕಟಕೋಳ ತಾಲ್ಲೂಕು ಪಂಚಾಯಿತಿ: ಹಿಂದುಳಿದ ‘ಎ’ ವರ್ಗ (ಮಹಿಳೆ).

ನಾಮಪತ್ರ: ಹೆಬ್ಬಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಹುಕ್ಕೇರಿ ತಹಶೀಲ್ದಾರ್ ಕಚೇರಿ, ಕಟಕೋಳ ತಾಲ್ಲೂಕು ಪಂಚಾಯಿತಿ ಉಪ ಚುನಾವಣೆಗೆ ರಾಮದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹಾಗೂ 34 ಗ್ರಾಮ ಪಂಚಾಯತಿಗಳ ಉಪ ಚುನಾವಣೆಗೆ ಆಯಾ ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು.

ಮಾದರಿ ನೀತಿಸಂಹಿತೆಯು ಜ. 25ರಿಂದ ಫೆ.11ರವರೆಗೆ ಜಾರಿಯಲ್ಲಿರುತ್ತದೆ. ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)