ಬೆಳಗಾವಿ: ‘2025ರ ಜನವರಿ ಮತ್ತು ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ(₹5 ಸಾವಿರ ಕೋಟಿ) ಈವರೆಗೆ ಫಲಾನುಭವಿಗಳಿಗೆ ತಲುಪಿಲ್ಲ. ಹಣಕಾಸು ಖಾತೆ ಹೊಂದಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಅದರ ಸ್ಥಿತಿಯ ಬಗ್ಗೆ ಉತ್ತರಿಸಲು ಸಾಧ್ಯವಾಗಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.

‘ತೆಲಂಗಾಣ ವಿಧಾನಸಭಾ ಚುನಾವಣೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳಸಲಾಗಿದೆ ಎಂಬ ಆರೋಪ ಈ ಹಿಂದೆ ಕೇಳಿಬಂದಿತ್ತು. ಈಗ ಗೃಹಲಕ್ಷ್ಮಿ ಯೋಜನೆಯ ₹5 ಸಾವಿರ ಕೋಟಿ ನಿಧಿಯನ್ನು ಕೆಲ ಚುನಾವಣೆಗಳಿಗೆ ಬಳಸಲಾಗಿದೆ ಎಂಬ ಅನುಮಾನವಿದೆ’ ಎಂದು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘2025ರ ಡಿಸೆಂಬರ್ನಲ್ಲಿ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ, ಗೃಹಲಕ್ಷ್ಮಿ ಯೋಜನೆಯ ₹5 ಸಾವಿರ ಕೋಟಿ ರೂಪಾಯಿ ನಿಧಿ ಫಲಾನುಭವಿಗಳಿಗೆ ತಲುಪದ ವಿಷಯವನ್ನು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಎತ್ತಿದ್ದರು. ಆದರೆ, ಸಿದ್ದರಾಮಯ್ಯ ಅವರು ಉತ್ತರಿಸಲಿಲ್ಲ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಕ್ತಾಯಗೊಂಡ ಅಧಿವೇಶನದಲ್ಲೂ ಈ ವಿಷಯವನ್ನು ಮತ್ತೆ ಪ್ರಸ್ತಾಪಿಸಿದರೂ ಯಾವುದೇ ಉತ್ತರ ಬಂದಿಲ್ಲ. ಮುಖ್ಯಮಂತ್ರಿ ತಕ್ಷಣವೇ ಇದಕ್ಕೆ ಉತ್ತರ ಕೊಡಬೇಕು’ ಎಂದು ಆಗ್ರಹಿಸಿದರು.

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ಮತ್ತು ವಿರೋಧ ಪಕ್ಷದ ಶಾಸಕನಾಗಿ, ನಾನು ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಟೀಕಿಸುತ್ತಿದ್ದೇನೆ. ಮುಡಾ ಭೂ ಹಗರಣದಲ್ಲೂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ರ್ಯಾಲಿ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆ ವಿಚಾರದಲ್ಲೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಬಗ್ಗೆ ನಮಗೆ ಯಾವುದೇ ಮೃದು ಧೋರಣೆ ಇಲ್ಲ. ಗೃಹಲಕ್ಷ್ಮಿ ಯೋಜನೆ ನಿಧಿ ವಿಷಯ ಇಲ್ಲಿಗೇ ಕೈಬಿಡುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕೇಂದ್ರಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಲಾಗುತ್ತಿರುವುದು ನಮಗೆ ಗಮನಕ್ಕೆ ಬಂದಿದೆ. ಅದರ ವಿರುದ್ಧವೂ ಧ್ವನಿ ಎತ್ತುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.