ಸೋಮವಾರ, ಆಗಸ್ಟ್ 26, 2019
20 °C

ಗುಂಡಿಗೆ ಬಿದ್ದ ಕಾರು

Published:
Updated:
Prajavani

ಬೆಳಗಾವಿ: ಇಲ್ಲಿನ ಅಶೋಕನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಭಾನುವಾರ ಕಾರೊಂದು ಉರುಳಿಬಿದ್ದಿತು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಾರ್‌ನಲ್ಲಿ ಚಾಲಕ ಮಾತ್ರ ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಗೊತ್ತಾಗಿದೆ.

‘ಆರು ತಿಂಗಳ ಹಿಂದೆಯೇ ಇಲ್ಲಿ ರಸ್ತೆಯನ್ನು ಅಗೆಯಲಾಗಿದೆ. ಆದರೆ, ಕಾಮಗಾರಿಯು ಕುಂಟುತ್ತಾ ಸಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಪಘಾತಕ್ಕೆ ಒಳಗಾಗುತ್ತಿದ್ದಾರೆ. ಅಲ್ಲದೇ ಸ್ಥಳದಲ್ಲಿ ಸೂಚನಾ ಫಲಕಗಳನ್ನೂ ಅಳವಡಿಸಿಲ್ಲ. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದರು.

Post Comments (+)