ಗುರುವಾರ , ಜೂನ್ 17, 2021
22 °C

ಬೆಳಗಾವಿ | ಭೀತಿ ಮೂಡಿಸುವ ಪೋಸ್ಟ್: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ತೆರವು ಸಂಬಂಧಿಸಿದಂತೆ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪುಣೆಯ, ಹಾಲಿ ಮೀರಜ್‌ನ ನಿವಾಸಿ ದಿನೇಶ ಕದಮ ಆರೋಪಿ.

‘ಗ್ರಾಮದಲ್ಲಿ ಅನಧಿಕೃತವಾಗಿ ಕೆಲವರು ಶಿವಾಜಿ ಪ್ರತಿಮೆ ಪ್ರತಿಷ್ಠಾಪಿಸಿದ್ದರು. ಅದನ್ನು ಹಿರಿಯರು ಹಾಗೂ ಸಮಾಜದ ಮುಖಂಡರು ಕೂಡಿ ತೆರವುಗೊಳಿಸಿದ್ದಾರೆ. ಆದರೆ, ಈ ಬಗ್ಗೆ ಆರೋಪಿಯು ಭಾಷೆಗಳು, ಜಾತಿಗಳ ನಡುವೆ ದ್ವೇಷ, ವೈಮನಸ್ಸು ಉಂಟು ಮಾಡುವ ಅಥವಾ ಬೆಳೆಸುವಂತಹ ವದಂತಿ ಹಬ್ಬಿಸುವ ಅಥವಾ ಅಪಾಯ ಭೀತಿ ಹುಟ್ಟಿಸುವ ಪೋಸ್ಟ್ ಮಾಡಿದ್ದರು. ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.