ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವೆ ಜೊಲ್ಲೆ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಪ್ರಕರಣ

Last Updated 31 ಮಾರ್ಚ್ 2023, 6:43 IST
ಅಕ್ಷರ ಗಾತ್ರ

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ಧ ನಿಪ್ಪಾಣಿ ಪೊಲೀಸ್‌ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ರಣರಾಗಿಣಿ ಮಹಿಳಾ ಸಂಘದಿಂದ ನಿಪ್ಪಾಣಿಯ ಮುನ್ಸಿಪಲ್‌ ಪ್ರೌಢಶಾಲೆ ಮೈದಾನದಲ್ಲಿ ಬುಧವಾರ ರಾತ್ರಿ ಅರಿಸಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರೂ ಪಾಲ್ಗೊಂಡಿದ್ದರು. ವೇದಿಕೆ ಮೇಲೆ ಹಾಡು ಮೂಡಿಬಂದಾಗ ಬಿಜೆಪಿ ಚಿಹ್ನೆ ಹಾಗೂ ಧ್ವಜಗಳನ್ನು ಹಾರಿಸಲಾಯಿತು. ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಭಾವಚಿತ್ರನ್ನೂ ಪ್ರದರ್ಶಿಸಲಾಯಿತು. ರಾತ್ರಿ 10ರ ಸುಮಾರಿಗೆ ಅಪಾರ ಸಂಖ್ಯೆಯ ಮಹಿಳೆಯರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇದೆಲ್ಲವೂ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ರಣರಾಗಿಣಿ ಮಹಿಳಾ ಮಂಡಳದ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT