ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಾನುಭವಿಗಳಿಗೆ ಹಣ ಬಿಡುಗಡೆ: ಕವಟಗಿಮಠ

Last Updated 2 ಅಕ್ಟೋಬರ್ 2021, 17:16 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಕಿತ್ತೂರು ಹಾಗೂ ರಾಯಬಾಗ ವಿಧಾನಸಭಾ ಕ್ಷೇತ್ರಗಳ ಫಲಾನುಭವಿಗಳಿಗೆ ವಸತಿ ಇಲಾಖೆಯಿಂದ ಹಣ ಬಿಡುಗಡೆಯಾಗಿದೆ’ ಎಂದು ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ತಿಳಿಸಿದ್ದಾರೆ.

ಈ ಬಗ್ಗೆ ‍ಪ್ರಕಟಣೆ ನೀಡಿರುವ ಅವರು, ‘ಆಗಸ್ಟ್‌ ಹಾಗೂ ಸೆಪ್ಟೆಂಬರ್‌ನಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2029–20 ಮತ್ತು 2020–21ರಲ್ಲಿ ವಿವಿಧ ಯೋಜನೆಗಳಲ್ಲಿ ಮಂಜೂರಾಗಿ ಕಾಮಗಾರಿಗಳು ವಿವಿಧ ಹಂತದಲ್ಲಿ ಸ್ಥಗಿತಗೊಂಡಿದ್ದುದು, ಇದರಿಂದ ಫಲಾನುಭವಿಗಳು ತೊಂದರೆ ಅನುಭವಿಸುತ್ತಿದ್ದುದು ಕಂಡುಬಂದಿತ್ತು. 2019–20ನೇ ಸಾಲಿನಲ್ಲಿ ಉಂಟಾದ ಪ್ರವಾಹದ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳಿಗೆ ಹಣ ಬಿಡುಗಡೆ ಆಗಿರಲಿಲ್ಲ. ಈ ವಿಷಯವನ್ನು ಜನರು ಗಮನಕ್ಕೆ ತಂದಿದ್ದರು ಮತ್ತು ಹಣ ಬಿಡುಗಡೆಗೆ ಕೋರಿದ್ದರು’ ಎಂದು ಮಾಹಿತಿ ನೀಡಿದ್ದಾರೆ.

‘ವಸತಿ ಸಚಿವ ವಿ. ಸೋಮಣ್ಣ ಅವರಲ್ಲಿ ಮನವಿ ಮಾಡಿದ್ದೆ. ಕೂಡಲೇ ಸ್ಪಂದಿಸಿದ ಅವರು, ಈ 4 ವಿಧಾನಸಭಾ ಕ್ಷೇತ್ರಗಳ ಗ್ರಾಮ ಪಂಚಾಯ್ತಿಗಳಿಗೆ ಆಗಸ್ಟ್‌ ಅಂತ್ಯದವರೆಗೆ ಬಸವ ವಸತಿ ಯೋಜನೆ, ದೇವರಾಜು ಅರಸು ವಸತಿ ಯೋಜನೆಗೆ ಮತ್ತು ನೆರೆಯಿಂದ ಹಾಳಾದ ಮನೆಗಳಿಗೆ ಜಿಪಿಎಸ್ ಆಧಾರಿತ ಭೌತಿಕ ಪ್ರಗತಿಗೆ ಅನುಗುಣವಾಗಿ ಅರ್ಹ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಬ್ಯಾಂಕ್‌ ಖಾತೆಗೆ ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ಸಚಿವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದಿದ್ದಾರೆ.

‘ಬೈಲಹೊಂಗಲಕ್ಕೆ ₹ 62.20 ಕೋಟಿ, ಬೆಳಗಾವಿ ಗ್ರಾಮೀಣಕ್ಕೆ ₹ 72.12 ಕೋಟಿ, ಕಿತ್ತೂರಿಗೆ ₹ 43.68 ಮತ್ತು ₹ 60.90 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT