ಬೆಳಗಾವಿ: ‘ಇಲ್ಲಿನ ಕಣಬರ್ಗಿ ಚೆಕ್‌ಪೋಸ್ಟ್‌ನಲ್ಲಿ ಮಂಗಳವಾರ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹9 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದ್ದಾರೆ.
‘ಬೆಳಗಾವಿಯಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರಿನ ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಖಾಸಗಿ ಫೈನಾನ್ಸ್‌ಗೆ ಸೇರಿದ ಹಣಕ್ಕೆ ಸಂಬಂಧಿಸಿ ಸಮರ್ಪಕ ದಾಖಲೆಗಳನ್ನು ಒದಗಿಸಿಲ್ಲ. ಹಣ ಸಾಗಿಸುವಾಗ ನಿಯಮಾವಳಿ ಪಾಲಿಸದಿರುವುದು ಕಂಡುಬಂದಿದೆ. ಹಾಗಾಗಿ ಸರ್ಕಾರಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಪ್ರಯಾಣಿಕರನ್ನು ಕರೆದೊಯ್ಯುವಂತಿಲ್ಲ: ಡಿ.ಸಿ
ಬೆಳಗಾವಿ: ‘ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ, ಅಂತಹ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
‘ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಮೋಟಾರು ವಾಹನ ಕಾಯ್ದೆ ಪ್ರಕಾರವೂ ಇದನ್ನು ನಿಷೇಧಿಸಲಾಗಿದೆ. ಪೊಲೀಸರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಪಾಸಣೆ ಆರಂಭಿಸಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.
‘ಸುರಕ್ಷಿತ ಪ್ರಯಾಣದ ದೃಷ್ಟಿಯಿಂದ ಸಾರ್ವಜನಿಕರು ಗೂಡ್ಸ್ ವಾಹನಗಳಲ್ಲಿ ಸಂಚರಿಸಬಾರದು. ವಾಹನ ಮಾಲೀಕರು ಇದಕ್ಕೆ ಅವಕಾಶ ನೀಡಬಾರದು’ ಎಂದು ಅವರು ಕೋರಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.