ಶುಕ್ರವಾರ, ಮೇ 20, 2022
19 °C

ಬೆಳಗಾವಿ: ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Vinay kulakarni

ಬೆಳಗಾವಿ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಶನಿವಾರ ಮುಂಜಾನೆ ಕರೆದೊಯ್ದರು.

ಮೂರು ದಿನಗಳವರೆಗೆ ತಮ್ಮ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು, ಅವರನ್ನು ಹೆಚ್ಚಿನ‌ ವಿಚಾರಣೆಗೆ ಒಳಪಡಿಸಲಿದ್ದಾರೆ.

ಶುಕ್ರವಾರ ಇಲ್ಲಿನ ಕಾರಾಗೃಹಕ್ಕೆ ಅವರನ್ನು ಕರೆತರಲಾಗಿತ್ತು. ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಶುಕ್ರವಾರ ಆದೇಶಿಸಿತ್ತು.

ಇದನ್ನೂ ಓದಿ: ಯೋಗೀಶಗೌಡ ಕೊಲೆ ಪ್ರಕರಣ: ಕಾಂಗ್ರೆಸ್‌ನ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ

ನ್ಯಾಯಾಲಯದ ಆದೇಶ ಪ್ರತಿಯನ್ನು ಜೈಲಿನ ಅಧಿಕಾರಿಗಳಿಗೆ ಹಾಜರುಪಡಿಸಿದ ಸಿಬಿಐ ಅಧಿಕಾರಿಗಳು ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ವಶಕ್ಕೆ ಪಡೆದರು.

ಇಂದು ವಿನಯ ಹುಟ್ಟುಹಬ್ಬವೂ ಹೌದು. ಹುಟ್ಟುಹಬ್ಬ ಆಚರಿಸಿಕೊಳ್ಳಲಾಗಲಿಲ್ಲ ಎಂಬ ದುಗುಡ ಅವರ ಮುಖದಲ್ಲಿ ಕಾಣಿಸುತ್ತಿತ್ತು. 

ಅವರನ್ನು ಸಿಬಿಐ ಅಧಿಕಾರಿಗಳು ಎಲ್ಲಿಗೆ ಕರೆದುಕೊಂಡು ಎನ್ನುವ ಮಾಹಿತಿ ಲಭ್ಯವಾಗಲಿಲ್ಲ.

ಇನ್ನಷ್ಟು...

ಮಾಜಿ ಸಚಿವ ವಿನಯ ಕುಲಕರ್ಣಿ ಮೂರು ದಿನ ಸಿಬಿಐ ವಶಕ್ಕೆ

ವಿನಯ್‌ ಕುಲಕರ್ಣಿ ಬಂಧನ: ಠಾಣೆ ಎದುರು ಪ್ರತಿಭಟನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು