ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ನವರಾತ್ರಿ ಹಾಗೂ ಇತರ ಉತ್ಸವಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸಬೇಕು’ ಎಂದು ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.

ಇಲ್ಲಿ ಶುಕ್ರವಾರ ನಡೆದ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನಲಾಕ್-5.0ರ ಮಾರ್ಗಸೂಚಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಿರುವಂತೆ ಸರಳ ಮತ್ತು ಸಾಂಕೇತಿಕವಾಗಿ ನವರಾತ್ರಿ ಆಚರಿಸಲು ದೇವಸ್ಥಾನ ಆಡಳಿತ ಮಂಡಳಿಗಳು ಕ್ರಮ ಕೈಗೊಳ್ಳಬೇಕು. ಸೋಂಕು ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಜನರು ಸೇರಿಸಿ, ದೇವಸ್ಥಾನದ ಆವರಣದಲ್ಲಿ ಮಾತ್ರವೇ ಉತ್ಸವ ಆಚರಿಸಬೇಕು’ ಎಂದರು.

‘ಜಿಲ್ಲೆಯಲ್ಲಿರುವ ಅಧಿಸೂಚಿತ ದೇವಸ್ಥಾನಗಳ ಬಗ್ಗೆ ಖಾಸಗಿ ಸಂಸ್ಥೆಯ ಮೂಲಕ ಕೂಲಂಕಷವಾಗಿ ಪರಿಶೀಲಿಸಿ ಸಮಗ್ರ ವರದಿ ಸಿದ್ಧಪಡಿಸಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಧಾರ್ಮಿಕ ಪರಿಷತ್ತಿನ ಪದನಿಮಿತ್ತ ಕಾರ್ಯದರ್ಶಿಯೂ ಆಗಿರುವ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ರವಿ ಕೋಟಾರಗಸ್ತಿ, ನ್ಯಾಯಿಕ ಸದಸ್ಯರಾದ ಯೋಗೇಶ್ ಕರಗುದ್ರಿ, ಮುಜರಾಯಿ ತಹಶೀಲ್ದಾರ್ ಡಿ.ಎನ್. ಜಾಧವ, ಪರಿಷತ್ತಿನ ನೂತನ ಸದಸ್ಯರಾದ ಶೀತಿಕಂಠ ಶ್ರೀಪಾದ ಜೋಶಿ, ವಿಠ್ಠಲ ಭರ್ಮಾ ಹುಬ್ಬಳ್ಳಿ, ಜಯಶ್ರೀ ಜಾಧವ, ಚಿಂತಾಮಣಿ ಗ್ರಾಮೋಪಾಧ್ಯೆ, ವಿಠ್ಠಲ ಮಾಳಿ, ವಿನೋದ ದೊಡ್ಡಣ್ಣವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.