ಶನಿವಾರ, ಅಕ್ಟೋಬರ್ 24, 2020
18 °C

ಸೆ. 14 ‘ಕನ್ನಡ ಭಾಷಾ ದಿನ’ವೆಂದು ಆಚರಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಸೆ. 14ರಂದು ಹಿಂದಿ ದಿವಸ್‌ಗೆ ಪರ್ಯಾಯವಾಗಿ ಅಂತರರಾಷ್ಟ್ರೀಯ ಕನ್ನಡ ಭಾಷಾ ದಿನವೆಂದು ಆಚರಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಇಲ್ಲಿನ ಕೇಂದ್ರ ಅಂಚೆ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

ಕನ್ನಡ ದಿನ ಆಚರಿಸುವಂತೆ ಕಚೇರಿ ಗೋಡೆಗಳಿಗೆ ಭಿತ್ತಿಪತ್ರಗಳನ್ನು ಅಂಟಿಸಿದರು. ಅಂಚೆ ಇಲಾಖೆ ಅಧಿಕಾರಿಗಳಿಗೆ ಸಿಹಿ ವಿತರಿಸಿದರು.

‘ರಾಷ್ಟ್ರೀಕೃತ ಬ್ಯಾಂಕ್‌, ಅಂಚೆ ಕಚೇರಿ ಹಾಗೂ ರೈಲು ನಿಲ್ದಾಣಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಆಡಳಿತದಲ್ಲಿ ಕನ್ನಡವನ್ನು ಬಳಸಬೇಕು. ಈ ರಾಜ್ಯದ ಸವಲತ್ತುಗಳನ್ನು ಪಡೆದು ಅನ್ಯ ಭಾಷೆಗಳ ಬಳಕೆಗೆ ಉತ್ತೇಜನ ನೀಡಬಾರದು. ಈ ಎಲ್ಲ ಕಚೇರಿಗಳಲ್ಲೂ ಕನ್ನಡ ಭಾಷಾ ದಿನವನ್ನು ಆಚರಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಸಂಗೋಡಿ, ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಾ ಯಾದವಾಡ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು