ಶನಿವಾರ, ಏಪ್ರಿಲ್ 1, 2023
31 °C

ಬೆಳಗಾವಿ: ಕನ್ನಡ ಸಂಘಟನೆಗಳಿಂದ ಸಂಭ್ರಮಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿರುವುದನ್ನು ಸ್ವಾಗತಿಸಿ, ಕನ್ನಡ ಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಸೋಮವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಿಸಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮಾತನಾಡಿ, ‘ಕಿತ್ತೂರು ಕರ್ನಾಟಕ ಎಂದು ಘೋಷಣೆ ಮಾಡಬೇಕು ಎನ್ನುವುದು ಇಡೀ ಕರ್ನಾಟಕದ ಜನರ ಬೇಡಿಕೆಯಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಿಷಯದಲ್ಲಿ ನುಡಿದಂತೆ ನಡೆದಿದ್ದಾರೆ. ಈಚೆಗೆ ನಡೆದ ಕಿತ್ತೂರು ಉತ್ಸವದ ಭಾಷಣದಲ್ಲಿ ಭರವಸೆ ನೀಡಿದ್ದರು. ಹೇಳಿದಂತೆಯೇ, ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದು ನಿಜಕ್ಕೂ ಸಂತಸದ ಸಂಗತಿಯಾಗಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ‘ಸರ್ಕಾರವು ಈ ಭಾಗದ ಜನರ ಆಶೋತ್ತರಕ್ಕೆ ಸ್ಪಂದಿಸಿರುವುದು ಸಂತಸ ಮೂಡಿಸಿದೆ. ಕಿತ್ತೂರು ಕರ್ನಾಟಕ ಎನ್ನುವುದು ಇಲ್ಲಿನ ಜನರ ಹೆಮ್ಮೆಯ ಸಂಗತಿಯಾಗಿದೆ. ಇದು ಉತ್ತರ ಕರ್ನಾಟಕ ಜನರಿಗೆ ಸಿಕ್ಕ ಜಯವಾಗಿದೆ’ ಎಂದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ರಮೇಶ ತಳವಾರ, ಬಾಳು ಜಡಗಿ, ಕಸ್ತೂರಿ ಭಾವಿ, ರಮೇಶ ಯರಗಣ್ಣವರ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು