ಸೋಮವಾರ, ಸೆಪ್ಟೆಂಬರ್ 28, 2020
27 °C

ರಾಮದುರ್ಗದ ಶಬರಿಕೊಳ್ಳದಲ್ಲಿ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿಪೂಜೆ ನೆರವೇರುತ್ತಿರುವ ಅಂಗವಾಗಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಶಬರಿಕೊಳ್ಳದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ರಾಮದುರ್ಗ ಮಂಡಲದ ವತಿಯಿಂದ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆದವು.

ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿ ಹೋಮ ನೆರವೇರಿಸಲಾಯಿತು. ಕರಸೇವೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ರಾಮದುರ್ಗದ ಶಾಸಕ ಮಹಾದೇವಪ್ಪ ಯಾದವಾಡ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಮುಖಂಡರಾದ ಮಹೇಶ, ಸುಭಾಷ ಪಾಟೀಲ, ಮಲ್ಲಣ್ಣ ಯಾದವಾಡ, ಮಂಡಲದ ಅಧ್ಯಕ್ಷ ರಾಜೇಶ್ ಬೀಳಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು