ಮಂಗಳವಾರ, ಅಕ್ಟೋಬರ್ 22, 2019
22 °C

ಕೇಂದ್ರದಿಂದ ಶೀಘ್ರವೇ ಪರಿಹಾರ: ಕಟೀಲ್

Published:
Updated:

ಬೆಳಗಾವಿ: ‘ಕೇಂದ್ರ ಸರ್ಕಾರದಿಂದ ಮೂರ್ನಾಲ್ಕು ದಿನಗಳಲ್ಲಿ ನೆರೆ ಪರಿಹಾರ ಬಿಡುಗಡೆಯಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರದ ಅಧಿಕಾರಿಗಳ ತಂಡವೂ ಬಂದು ಹೋಗಿದೆ. ರಾಜ್ಯ ಸರ್ಕಾರವೂ ವರದಿ ಸಲ್ಲಿಸಿದೆ. ಅನುದಾನ ಬಿಡುಗಡೆ ವಿಷಯವನ್ನು ಪ್ರಧಾನಿ ಹಾಗೂ ಗೃಹ ಸಚಿವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ’ ಎಂದರು.

‘ಕೇರಳದಲ್ಲಿ ಪ್ರವಾಹ ಬಂದು ಹಲವು ತಿಂಗಳುಗಳಾಗಿವೆ. 16 ರಾಜ್ಯಗಳ ವರದಿ ಕೇಂದ್ರಕ್ಕೆ ಸಲ್ಲಿಕೆಯಾಗಿದೆ. ಮೊದಲು ವರದಿ ಕೊಟ್ಟವರಿಗೆ ಹಣ ಬಿಡುಗಡೆ ಆಗಲಿದೆ. ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೊಡಲಾಗಿದೆ’ ಎಂದು ತಿಳಿಸಿದರು.

‘ಬೆಳಗಾವಿಯಲ್ಲಿ ಗಾಂಧಿ ಜಯಂತಿಯನ್ನು ವಿಭಿನ್ನವಾಗಿ ಆಚರಿಸುತ್ತೇವೆ’ ಎಂದರು.

ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ನಗರಕ್ಕೆ ಬಂದ ಅವರನ್ನು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರು ಸಂಭ್ರಮದಿಂದ  ಬರಮಾಡಿಕೊಂಡರು. ಚಿಕ್ಕೋಡಿಯಲ್ಲಿ ಅ.2ರಂದು ಕಾರ್ಯಕರ್ತರ ಸಭೆ ನಡೆಯಲಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)