ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಹಾನಿ ಅಧ್ಯಯನ: ಕೇಂದ್ರ ತಂಡದಿಂದ ಪ್ರವಾಸ ಆರಂಭ

Last Updated 5 ಸೆಪ್ಟೆಂಬರ್ 2021, 6:16 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ನೆರೆಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಕೇಂದ್ರದ ಅಧಿಕಾರಿಗಳ ತಂಡ ಭಾನುವಾರ ಪ್ರವಾಸ ಆರಂಭಿಸಿದೆ.

ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಧಿಕಾರಿ ಸುಶೀಲ್ ಪಾಲ್ ನೇತೃತ್ವದ ತಂಡ ಖಾನಾಪುರ ಪಟ್ಟಣದ ಮಾರುತಿ ನಗರ ಸೇತುವೆಗೆ ಭೇಟಿ ನೀಡಿ, ಮಲಪ್ರಭಾ ನದಿಯಿಂದ ಆಗಿರುವ ಹಾನಿ ವೀಕ್ಷಿಸಿತು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಹಾನಿ ಬಗ್ಗೆ ಮಾಹಿತಿ ನೀಡಿದರು. ಬಳಿಕ, ತಂಡದ ಸದಸ್ಯರು ಖಾನಾಪುರದಲ್ಲಿ ಹಾನಿಗೀಡಾಗಿರುವ ಕೋಳಿ ಸಾಕಾಣಿಕೆ ಕೇಂದ್ರ ಹಾಗೂ ಪೊಲೀಸ್ ತರಬೇತಿ ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದಕ್ಕೂ ಮುನ್ನ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ತಂಡವು ಹುಕ್ಕೇರಿ, ಗೋಕಾಕ, ಅಥಣಿ, ಕಾಗವಾಡ ಹಾಗೂ ಚಿಕ್ಕೋಡಿ ತಾಲ್ಲೂಕುಗಳಲ್ಲಿ ಸೋಮವಾರದವರೆಗೆ ಪ್ರವಾಸ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT