ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಉದ್ಯೋಗ ಖಾತ್ರಿ: ದೂರು ದಾಖಲಿಸಿ’

Published 3 ಜುಲೈ 2024, 14:09 IST
Last Updated 3 ಜುಲೈ 2024, 14:09 IST
ಅಕ್ಷರ ಗಾತ್ರ

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ದೂರುಗಳು ಇದ್ದಲ್ಲಿ ಬೆಳಗಾವಿ ಓಂಬುಡಮ್ಸನ್ ಕಚೇರಿಯಲ್ಲಿ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.

ಜಿಲ್ಲೆಯ ಯಾವುದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳಲ್ಲಿ ಅವ್ಯವಹಾರ ಹಾಗೂ ನಿಯಮ ಬಾಹಿರವಾಗಿ ಕಾಮಗಾರಿ ಕೈಗೊಂಡಿದ್ದರೆ ಹಳೆ ಜಿಲ್ಲಾ ಪಂಚಾಯಿತಿ ಕಟ್ಟಡ ಪಕ್ಕದಲ್ಲಿರುವ ಓಂಬುಡಮ್ಸನ್ ಕಚೇರಿಗೆ ನೇರವಾಗಿ ಬಂದು ದೂರು ಸಲ್ಲಿಸಬಹುದು.

ದೂರು ದಾಖಲಿಸಿಕೊಂಡ ಓಂಬುಡಮ್ಸನ್ ಅವರು ತನಿಖೆ ನಡೆಸಿ ಜಿಲ್ಲಾ ಪಂಚಾಯಿತಿಗೆ ವರದಿ ಸಲ್ಲಿಸುತ್ತಾರೆ. ಹಾಗಾಗಿ, ದೂರು ಸಲ್ಲಿಸಿದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ರಾಹುಲ್ ಶಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT