ಬೆಳಗಾವಿ: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಜಿಲ್ಲೆಯಲ್ಲಿ ಬುಧವಾರ 49 ಕೇಂದ್ರಗಳಲ್ಲಿ ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ ಸುಗಮವಾಗಿ ನಡೆಯಿತು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 7,939 ವಿದ್ಯಾರ್ಥಿಗಳು ಎರಡೂ ವಿಷಯಗಳ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಬೆಳಿಗ್ಗೆ 10.30ರಿಂದ 11.50ರವರೆಗೆ ನಡೆದ ಭೌತ ವಿಜ್ಞಾನ ವಿಷಯದ ಪರೀಕ್ಷೆಗೆ 7,436 ವಿದ್ಯಾರ್ಥಿಗಳು ಹಾಜರಾದರು. 503 ವಿದ್ಯಾರ್ಥಿಗಳು ಗೈರಾಗಿದ್ದರು.

ಮಧ್ಯಾಹ್ನ 2.30ರಿಂದ 3.50 ರವರೆಗೆ ನಡೆದ ರಸಾಯನ ವಿಜ್ಞಾನ ವಿಷಯದ ಪರೀಕ್ಷೆಗೆ 7,430 ವಿದ್ಯಾರ್ಥಿಗಳು ಹಾಜರಾದರೆ, 509 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿಲ್ಲ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 10,597 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಭೌತ ವಿಜ್ಞಾನ ವಿಷಯದ ಪರೀಕ್ಷೆಗೆ 10,153 ವಿದ್ಯಾರ್ಥಿಗಳು ಹಾಜರಾದರೆ, 444 ವಿದ್ಯಾರ್ಥಿಗಳು ಗೈರು ಹಾಜರಾದರು.

ರಸಾಯನ ವಿಜ್ಞಾನ ವಿಷಯದ ಪರೀಕ್ಷೆಗೆ 10,152 ವಿದ್ಯಾರ್ಥಿಗಳು ಹಾಜರಾದರೆ, 445 ವಿದ್ಯಾರ್ಥಿಗಳು ಗೈರಾಗಿದ್ದರು.

ಏಪ್ರಿಲ್ 17ರಂದು ಬೆಳಿಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.