ಬುಧವಾರ, ಮೇ 18, 2022
23 °C

ಚಚಡಿ ಏತ ನೀರಾವರಿಗೆ ಚಾಲನೆ 26ರಂದು

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ನೇಸರಗಿ: ‘ಚಚಡಿ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆ 6 ಕಿ.ಮೀ.ನಿಂದ 39 ಕಿ.ಮೀ.ವರೆಗಿನ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಸಮಾರಂಭ ಜ. 26ರಂದು ಮಧ್ಯಾಹ್ನ 12ಕ್ಕೆ ವನ್ನೂರ ಗ್ರಾಮದ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೆರವೇರಿಸಲಿದ್ದಾರೆ’ ಎಂದು ಕಿತ್ತೂರ ಶಾಸಕ ಮಹಾಂತೇಶ ದೊಡ್ಡಗೌಡರ ತಿಳಿಸಿದರು.

ಚಚಡಿ ಏತ ನೀರಾವರಿ ಯೋಜನೆಯ ಅಡಿಗಲ್ಲು, ನೇಸರಗಿ ಸರ್ಕಾರಿ ಪದವಿ ಕಾಲೇಜಿನ ಹೆಚ್ಚುವರಿ ಕೊಠಡಿಗಳು ಮತ್ತು ದೇಶನೂರ ನೂತನ ಪ್ರಾಥಮಿಕ ಕೇಂದ್ರ ಉದ್ಘಾಟನೆ ಪೂರ್ವಭಾವಿ ಸಭೆಯಲ್ಲಿ ಸಿದ್ಧತೆ ಪರಿಶೀಲಿಸಿ ಅವರು ಮಾತನಾಡಿದರು.

‘ಜಲ ಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದಿಂದ ಈ ಭಾಗದ ರೈತರ ಸಂಕಷ್ಟ ನಿವಾರಿಸುವ ಸಲುವಾಗಿ ಮಾರ್ಕಂಡೇಯ ಮುಖ್ಯ ಕಾಲುವೆಯಿಂದ ಚಚಡಿ ಏತನೀರಾವರಿ ಮೂಲಕ 2,718 ಹೆಕ್ಟೇರ್ ಕ್ಷೇತ್ರಕ್ಕೆ ನೀರಾವರಿ ಮಾಡಲು ಉದ್ದೇಶಿಸಲಾಗಿದೆ’ ಎಂದರು.

‘26ರಂದು ದೇಶನೂರದಲ್ಲಿ ₹ 2.31 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ, ನೇಸರಗಿಯಲ್ಲಿ ₹ 95 ಲಕ್ಷ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣಗೊಂಡ ಸರ್ಕಾರಿ ಪದವಿ ಕಾಲೇಜಿನ ಹೆಚ್ಚುವರಿ ಕೊಠಡಿ, ಗ್ರಂಥಾಲಯವನ್ನು ಉಸ್ತುವಾರಿ ಸಚಿವರು ಉದ್ಘಾಟಿಸುವರು‘ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಎಫ್. ಕೊಳದೂರ, ಅಡಿವೆಪ್ಪ ಮಾಳಣ್ಣವರ, ಶಂಕರ ತಿಗಡಿ, ಎಸ್.ಎಂ. ಪಾಟೀಲ, ಮಲ್ಲೇಶ ಮಾಳಣ್ಣವರ, ತಾ.ಪಂ. ಇಒ ಸುಭಾಷ ಸಂಪಗಾವಿ, ಪ್ರಾಚಾರ್ಯ ಎಂ.ವೈ. ಹಿತ್ತಾಲಗೌಡರ, ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ತುಬಾಕಿ, ಪಿಎಸ್‌ಐ ವೈ.ಎಲ್. ಶೀಗಿಹಳ್ಳಿ, ದೇಶನೂರ ಗ್ರಾ.ಪಂ. ಅಧ್ಯಕ್ಷೆ ಶಂಕ್ರಮ್ಮ ಚಡಿಚಾಳ, ಉಪಾಧ್ಯಕ್ಷೆ ಶೋಭಾ ಭಜಂತ್ರಿ, ಮುಖಂಡ ಶ್ರೀಶೈಲ ಕಮತಗಿ, ವನ್ನೂರ ಗ್ರಾ.ಪಂ. ಅಧ್ಯಕ್ಷ ಸಿದ್ದಪ್ಪ ಮಿಂಡೊಳ್ಳಿ, ಸದಸ್ಯ ನಿಂಗಪ್ಪ ಪೋತಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.